Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ ಪ್ರದಾನ ಸಮಾರಂಭ
    Awards

    ರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ ಪ್ರದಾನ ಸಮಾರಂಭ

    April 26, 20232 Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಧಾರವಾಡದ ರಂಗಾಯಣದಲ್ಲಿ ದಿನಾಂಕ 16-04-2023 ರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ ಪ್ರದಾನ ಸಮಾರಂಭ ನೆರವೇರಿತು. ಅತಿಥಿಯ ಸ್ಥಾನದಿಂದ ಮಾತನಾಡಿದ ಕನ್ನಡದ ಶ್ರೇಷ್ಟ ಕವಿ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು “ಕನ್ನಡದ ಬಹು ಮುಖ್ಯ ಕಥೆಗಾರರಾದ ರಾಘವೇಂದ್ರ ಪಾಟೀಲರ ಹೆಸರಿನಲ್ಲಿ ಕಥಾ ಪ್ರಶಸ್ತಿ ನೀಡುವ ಮೂಲಕ ಯುವ ಮನಸ್ಸುಗಳು ಸಾಮಾಜಿಕ ಋಣವನ್ನು ತೀರಿಸುವ ಉತ್ತಮ ಕಾರ್ಯವನ್ನು ಮಾಡುತ್ತಿವೆ. ಪಾಟೀಲರ ಬದುಕಿನ ಆದರ್ಶ ಮತ್ತು ಸಾಹಿತ್ಯಕ ಧೋರಣೆಗಳನ್ನು ಅನುಸರಿಸುವುದರೊಂದಿಗೆ ಯೋಗ್ಯ ಬರಹಗಾರರನ್ನು ಆಯ್ದು ಪ್ರಶಸ್ತಿಯನ್ನು ನೀಡುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ, ಲಾಬಿ, ಸ್ವಜನ ಪಕ್ಷಪಾತಗಳಿಗೆ ಒಳಗಾಗದೆ, ಪಾರದರ್ಶಕ ನೀತಿಯ ಮೂಲಕ ಸತ್ಪಾತ್ರರಿಗಷ್ಟೇ ಯೋಗ್ಯತೆಯನ್ನು ಕಲ್ಪಿಸುವ ಇಂಥ ಯೋಜನೆಗಳು ಭವಿಷ್ಯದಲ್ಲಿ ಯಶಸ್ಸು ಕಾಣಲಿ” ಎಂದು ಹಾರೈಸಿದರು.

    ಖ್ಯಾತ ಕಾದಂಬರಿಕಾರ ಎಂ. ಆರ್. ದತ್ತಾತ್ರಿಯವರು ರಾಘವೇಂದ್ರ ಪಾಟೀಲರ ‘ಗೈರ ಸಮಜೂತಿ’ ಕಾದಂಬರಿಯ ಕುರಿತು ಮಾತನಾಡಿದರು.

    ಯುವ ವಿಮರ್ಶಕ ಮತ್ತು ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀ ವಿಕಾಸ ಹೊಸಮನಿಯವರು ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ ಮತ್ತು ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಯ ಕುರಿತು ಮಾತನಾಡಿ, ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಮತ್ತು ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿಯ ಕುರಿತು ಮಾಹಿತಿಗಳನ್ನು ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಖ್ಯಾತ ಸಾಹಿತಿ ಪ್ರೊ. ಮಲ್ಲಿಕಾರ್ಜುನ ಹಿರೇಮಠರು ಸಾಹಿತ್ಯ ವೇದಿಕೆಯ ಕಾರ್ಯ ಚಟುವಟಿಕೆಗಳು ಮತ್ತು ಪಾಟೀಲರ ಕುರಿತು ಉಪಯುಕ್ತ ವಿಚಾರಗಳನ್ನು ಹಂಚಿಕೊಂಡರು.

    72 ವಸಂತಗಳನ್ನು ಪೂರೈಸಿದ ಕನ್ನಡದ ಶ್ರೇಷ್ಠ ಕಥೆಗಾರ ರಾಘವೇಂದ್ರ ಪಾಟೀಲರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

    ಕನ್ನಡದ ಖ್ಯಾತ ಕವಿಗಳಾದ ಡಾ. ಎಚ್.ಎಸ್. ವೆಂಕಟೇಶಮೂರ್ತಿಯವರು ಮಹಾಂತೇಶ ನವಲಕಲ್ಲ ಮತ್ತು ಶ್ರೀಲೋಲ ಸೋಮಯಾಜಿಯವರಿಗೆ 2022ನೇ ಸಾಲಿನ ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.

    ಪ್ರೊ. ರಾಘವೇಂದ್ರ ಪಾಟೀಲರು ವಾಸುದೇವ ನಾಡಿಗ್ ಮತ್ತು ಡಾ. ರತ್ನಾಕರ ಕುನುಗೋಡು ಅವರಿಗೆ ‘ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.

    ಈ ಸಮಾರಂಭದಲ್ಲಿ ರಾಘವೇಂದ್ರ ಪಾಟೀಲರು ಸ್ವತಃ ತಾವೇ ಇಂಗ್ಲಿಷಿಗೆ ಅನುವಾದಿಸಿದ ‘ದೇಸಗತಿ’ ಕಥಾಸಂಕಲನದ ಇಂಗ್ಲಿಷ್ ಅನುವಾದ ‘In the Domain of White Herons’ ಕೃತಿಯನ್ನು ಖ್ಯಾತ ವಿಮರ್ಶಕ ಡಾ. ಎಂ.ಜಿ. ಹೆಗಡೆಯವರು ಬಿಡುಗಡೆಗೊಳಿಸಿದರು. ತಮ್ಮ ಕಥೆಗಳನ್ನು ತಾವೇ ಅನುವಾದ ಮಾಡುವ ಸವಾಲನ್ನು ಸ್ವೀಕರಿಸಿದ ಪಾಟೀಲರು ಅದರಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದಾರೆ. ಇಂಗ್ಲಿಷ್ ಅನುವಾದದ ಮೂಲಕ ಅವರ ಕತೆಗಳು ಇನ್ನಷ್ಟು ಅರ್ಥ ವಿಸ್ತಾರಗಳನ್ನು ಪಡೆದಿವೆ ಎಂದು ಅವರು ನುಡಿದರು.

    ರಾಘವೇಂದ್ರ ಪಾಟೀಲರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟ ‘ತೇರು’ ಕಾದಂಬರಿಯನ್ನು ಹಿಂದಿಗೆ ಭಾಷಾಂತರಿಸಿದ ಹಿರಿಯ ಅನುವಾದಕಿ ಪ್ರೊ ಮಾಲತಿ ಆದವಾನಿಯವರ ಹಿಂದಿ ಅವತರಣಿಕೆ ‘ರಥ್’ ಅನ್ನು ಎಚ್.ಎಸ್. ವೆಂಕಟೇಶಮೂರ್ತಿಯವರು ಬಿಡುಗಡೆಗೊಳಿಸಿದರು.

    ನಿಡುಗಾಲದ ಮಿತ್ರರೂ, ಸಾಹಿತ್ಯಿಕ ಸಹೋದ್ಯೋಗಿಗಳೂ ಆದ ಎಚ್.ಎಸ್.ವಿ. ಮತ್ತು ರಾಘವೇಂದ್ರ ಪಾಟೀಲರು ಐದು ದಶಕಗಳ ತಮ್ಮ ವೈಯಕ್ತಿಕ ಮತ್ತು ಸಾಹಿತ್ಯಕ ಒಡನಾಟವನ್ನು ಹಂಚಿಕೊಂಡದ್ದು ಸಭಿಕರನ್ನು ಆರ್ದ್ರಗೊಳಿಸಿತು.

    ಕನ್ನಡದ ಪ್ರತಿಷ್ಠಿತ ಕಥಾ ಪ್ರಶಸ್ತಿ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ವೇದಿಕೆಯ ಮಹಾಪೋಷಕ ಡಾ. ಬಿ.ಸಿ. ಪ್ರಭಾಕರ, ಸಂಚಾಲಕ ವಿಕಾಸ ಹೊಸಮನಿ, ಎಂ.ಆರ್. ದತ್ತಾತ್ರಿ, ಸಂಕೇತ ಪಾಟೀಲ ಮತ್ತು ಡಾ. ಸುಭಾಷ ಪಟ್ಟಾಜೆಯವರನ್ನು ಎಚ್.ಎಸ್. ವೆಂಕಟೇಶ ಮೂರ್ತಿಯವರು ಅಭಿನಂದಿಸಿದರು.

    ಎಚ್.ಎಸ್.ವಿ.ಯವರು ಎಕ್ಕುಂಡಿಯವರ ಜೊತೆಗಿನ ತಮ್ಮ ಒಡನಾಟದ ಕುರಿತು ಸ್ವಾರಸ್ಯಕರವಾದ ಸಂಗತಿಗಳನ್ನು ಹೇಳಿದರು.

    ರಾಘವೇಂದ್ರ ಪಾಟೀಲರ ‘ಮಾಯಿಯ ಮುಖಗಳು’ ಕಥಾಸಂಕಲನಕ್ಕೆ 25 ವರ್ಷ ಮತ್ತು ‘ತೇರು’ ಕಾದಂಬರಿಗೆ 20 ವರ್ಷ ತುಂಬಿದ ಸವಿನೆನಪಿಗೆ ಶ್ರೀ ಆನಂದ ಝಂಜರವಾಡ ಮತ್ತು ಬಸು ಬೇವಿನಗಿಡದ ಆ ಕೃತಿಗಳ ಕುರಿತು ಮಾತನಾಡಿದರು.

    ಶ್ರೀ ಮಹಾದೇವ ಹಡಪದ ತಂಡದವರು ಪ್ರಸ್ತುತ ಪಡಿಸಿದ ಪಾಟೀಲರ ‘ಮತ್ತೊಬ್ಬ ಮಾಯಿ’ ನಾಟಕ ನೆರೆದವರನ್ನು ಮಂತ್ರಮುಗ್ಧಗೊಳಿಸುವಲ್ಲಿ ಯಶಸ್ವಿಯಾಯಿತು.

    ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸದಸ್ಯೆ ಮೀನಾ ಮೈಸೂರು ಸ್ವಾಗತಿಸಿದರು. ಹನುಮಂತ ಕಾಖಂಡಕಿ ಕಾರ್ಯಕ್ರಮವನ್ನು ನಿರೂಪಿಸಿದರು.

    ಇಡೀ ದಿನ ಅದ್ದೂರಿಯಾಗಿ ನಡೆದ ರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಹಿತ್ಯ ಪ್ರಿಯರು ಕಿಕ್ಕಿರಿದು ನೆರೆದು ಸಮಾರಂಭವನ್ನು ಯಶಸ್ವಿಗೊಳಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಳ್ಳಾರೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
    Next Article ಜನಪದ ಕಲಾವಿದ, ಮಾಚಾರು ಗೋಪಾಲ ನಾಯ್ಕ ನಿಧನ
    roovari

    2 Comments

    1. ರಾಧಿಕಾ ವಿ ಗುಜ್ಜರ್ on April 26, 2023 6:39 pm

      ಒಂದು ಸಾರ್ಥಕ ಕಾರ್ಯಕ್ರಮದ ಮಾಹಿತಿ. ಅಭಿನಂದನೆಗಳು ಹಾಗೂ ವಂದನೆಗಳು.

      Reply
    2. Jimmyjeava on February 15, 2024 7:13 am

      Good luck 🙂

      Reply

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    2 Comments

    1. ರಾಧಿಕಾ ವಿ ಗುಜ್ಜರ್ on April 26, 2023 6:39 pm

      ಒಂದು ಸಾರ್ಥಕ ಕಾರ್ಯಕ್ರಮದ ಮಾಹಿತಿ. ಅಭಿನಂದನೆಗಳು ಹಾಗೂ ವಂದನೆಗಳು.

      Reply
    2. Jimmyjeava on February 15, 2024 7:13 am

      Good luck 🙂

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.