Subscribe to Updates

    Get the latest creative news from FooBar about art, design and business.

    What's Hot

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಯಕ್ಷಭಾರತಿಯಿಂದ ಎರಡು ಪ್ರಸಂಗಗಳ ಬಾನುಲಿ ಯಕ್ಷಗಾನ | ಅಕ್ಟೋಬರ್ 25  
    Yakshagana

    ಕರ್ನಾಟಕ ಯಕ್ಷಭಾರತಿಯಿಂದ ಎರಡು ಪ್ರಸಂಗಗಳ ಬಾನುಲಿ ಯಕ್ಷಗಾನ | ಅಕ್ಟೋಬರ್ 25  

    October 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಮಹಾಕವಿ ಕಾಳಿದಾಸನ ‘ಅಭಿಜ್ಞಾನ ಶಾಕುಂತಲ’ ಸಂಸ್ಕೃತ ನಾಟಕವನ್ನಾಧರಿಸಿದ ‘ಸತೀ ಶಕುಂತಲೆ’ ಯಕ್ಷಗಾನ ತಾಳಮದ್ದಳೆಯು ಮಂಗಳೂರು ಆಕಾಶವಾಣಿಯಲ್ಲಿ ಎರಡು ಭಾಗಗಳಾಗಿ  ಮೂಡಿ ಬರಲಿದೆ. ಕರ್ನಾಟಕ ಯಕ್ಷಭಾರತಿ ಪುತ್ತೂರು ತಂಡದ ಕಲಾವಿದರು ಭಾಗವಹಿಸಿರುವ ಈ ಯಕ್ಷಗಾನ ತಾಳಮದ್ದಳೆಯ ಮೊದಲನೇ ಭಾಗ ‘ಮುದ್ರಿಕಾ ಪ್ರದಾನ’ವು 25 ಅಕ್ಟೋಬರ್ 2024ರ ಶುಕ್ರವಾರದಂದು ರಾತ್ರಿ ಗಂಟೆ 9.30ಕ್ಕೆ ಪ್ರಸಾರವಾಗಲಿದೆ.
    ಕಾರ್ಯಕ್ರಮದಲ್ಲಿ ಅರ್ಥಧಾರಿಗಳಾಗಿ ಭಾಸ್ಕರ ರೈ ಕುಕ್ಕುವಳ್ಳಿ, ಗಣರಾಜ ಕುಂಬ್ಳೆ, ಎಂ.ಕೆ. ರಮೇಶಾಚಾರ್ಯ, ರಮೇಶ ಸಾಲ್ವಣ್ಕರ್ ಹಾಗೂ ಉಮೇಶಾಚಾರ್ಯ ಗೇರುಕಟ್ಟೆ  ಪಾತ್ರ ವಹಿಸಲಿದ್ದಾರೆ. ಭಾಗವತರಾಗಿ ಪ್ರಶಾಂತ ರೈ ಪುತ್ತೂರು, ಹಿಮ್ಮೇಳದಲ್ಲಿ ಪಿ. ಟಿ. ಜಯರಾಮ ಭಟ್, ಕೋಳ್ಯೂರು ಭಾಸ್ಕರ ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಸಹಕರಿಸಿದ್ದಾರೆ.
     ‘ಸತೀ ಸಮಾಗಮ’ –  ನವೆಂಬರ್ 1
    ಪ್ರಸಂಗದ ಎರಡನೇ ಭಾಗ ‘ಸತೀ ಸಮಾಗಮ’ ದಿನಾಂಕ 1 ನವೆಂಬರ್ 2024ರಂದು ರಾತ್ರಿ 9:30ಕ್ಕೆ ಪ್ರಸಾರವಾಗುವುದು. ಕರ್ನಾಟಕ ಯಕ್ಷಭಾರತಿ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಯೋಜಿಸಿದ ಈ ಯಕ್ಷಗಾನವನ್ನು ಮಂಗಳೂರು ಆಕಾಶವಾಣಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೂರ್ಯನಾರಾಯಣ ಭಟ್ ಪಿ.ಎಸ್. ನಿರ್ಮಿಸಿ ಬಾನುಲಿ ಪ್ರಸಾರಕ್ಕೆ ಸಿದ್ಧಪಡಿಸಿದ್ದಾರೆ. ಚೈತನ್ಯ ಪ್ರಶಾಂತ್ ಧ್ವನಿಮುದ್ರಣದಲ್ಲಿ ಸಹಕರಿಸಿದ್ದಾರೆ ಎಂದು ಪುತ್ತೂರಿನ ಕರ್ನಾಟಕ ಯಕ್ಷಭಾರತಿಯು ತಿಳಿಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೇವೆ
    Next Article ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ನಾಟಕ ಪ್ರದರ್ಶನ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಕೊಂಚಾಡಿಯಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.