ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಹಾಗೂ ಕನ್ನಡ ವಿಭಾಗ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ ‘ರಂಗ ಸಂಸ್ಕೃತಿ’ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 13 ಆಗಸ್ಟ್ 2025ರಂದು ಅಪರಾಹ್ನ 2-00 ಗಂಟೆಗೆ ವಿದ್ಯಾಗಿರಿ ಎ.ವಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಂಗ ನಿರ್ದೇಶಕ ಮತ್ತು ಸಾಹಿತಿ ಡಾ. ಶ್ರೀಪಾದ ಭಟ್ ಇವರು ಉಪನ್ಯಾಸ ನೀಡಲಿದ್ದಾರೆ.