ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಮತ್ತು ನಾಟ್ಕ ಬೆಂಗಳೂರು ಇವರ ಸಹಕಾರದೊಂದಿಗೆ ‘ರಂಗಸಂವಾದ -06’ ಕಾರ್ಯಕ್ರಮವನ್ನು ದಿನಾಂಕ 05 ಜುಲೈ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿ ಆವರಣದ ರಂಗಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಪ್ರಶಸ್ತಿ ವಿಜೇತ ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದೆ ಶ್ರೀಮತಿ ಅಕ್ಷತಾ ಪಾಂಡವಪುರ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.