Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜಯಾನಂದ ಪೆರಾಜೆ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ’
    Awards

    ಜಯಾನಂದ ಪೆರಾಜೆ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ’

    July 23, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಯವರಿಗೆ 2026ನೇ ಸಾಲಿನ ‘ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ ರಾವ್ ಬೇಕಲ್‌ ತಿಳಿಸಿದ್ದಾರೆ.

    ‌ಜಯಾನಂದ ಪೆರಾಜೆಯವರು ಕನ್ನಡ ಭಾಷಾ ಶಿಕ್ಷಕರಾಗಿ, ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿದ್ದು, ಲೇಖನಗಳ ಮೂಲಕ ಪರಿಚಿತರಾಗಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ, ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಜೇಸಿ, ಎಸ್.ಸಿ.ಐ. ಲಯನ್ಸ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ, ಸಾಮಾಜಿಕ ಕಾರ್ಯದಲ್ಲಿ ಅವಿರತ ತೊಡಗಿಸಿಕೊಂಡಿರುವ ಪೆರಾಜೆಯವರ ಬಹುಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ದಿನಾಂಕ 26 ಜುಲೈ 2026ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ತಿಳಿಸಿದೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವಭಾರತಿ ಯಕ್ಷ ಸಂಭ್ರಮ ಯಕ್ಷಗಾನ ತಾಳಮದ್ದಳೆ ಸಪ್ತಾಹ
    Next Article ಮಂಗಳೂರು ಮಿತ್ರ ಮಂಡಳಿಯ ಪುನಶ್ವೇತನದ ಚಾಲನಾ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026

    ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 02

    July 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.