ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಹಾಗೂ ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ ಇದರ ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ವರ್ಷಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ದಿನಾಂಕ 27 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ.
ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ನಿರ್ದೇಶಕರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಇವರು ದೀಪ ಪ್ರಜ್ವಲನೆ ಮಾಡಲಿದ್ದು, ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ಟೀಚರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರು ಅಧ್ಯಕ್ಷತೆ ವಹಿಸಲಿದ್ದು, ಜನಪ್ರಿಯ ಪತ್ರಕರ್ತ, ಸಾಹಿತಿ ನಿರ್ಮಾಪಕರಾದ ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ -2025’ ಪ್ರದಾನ ಸಮಾರಂಭ ನಡೆಯಲಿದೆ.