ಉಡುಪಿ: ಮಾಹೆ ವಿ.ವಿ. ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ ಗೋವಿಂದ ಪೈ ಸಂಶೋಧನ ಸಂಪುಟ ಭಾಗ-2ರ ಅನಾವರಣ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರ ಭಾನುವಾರ ಬೆಳಗ್ಗೆ 10 ಗಂಟೆಗೆ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕೇಂದ್ರದ ಸಲಹ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ್ ರೈ ಇವರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಯಮದಲ್ಲಿ ಗ್ರಂಥವನ್ನು ಮಾಹೆ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಅನಾವರಣಗೊಳಿಸಲಿದ್ದು, ಕುಲಪತಿ ಲೆ. ಜ. ಡಾ. ಎಂ. ಡಿ. ವೆಂಕಟೇಶ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತಿತರರು ಭಾಗವಹಿಸುವರು. ಇದರೊಂದಿಗೆ 2024ನೇ ಸಾಲಿನ ಗೋವಿಂದ ಪೈ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಡಾ. ಹಂ.ಪ. ನಾಗರಾಜಯ್ಯ ಅವರಿಗೆ ಪ್ರದಾನ ಮಾಡಲಾಗುವುದು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ತಾಳ್ತಜೆ ವಸಂತ ಕುಮಾರ್ ಅಭಿನಂದನ ಭಾಷಣ ಮಾಡಲಿರುವರು. ಎಂದು ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.