Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1
    Literature

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಯ್ಯರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ಹೋಬಳಿ ಘಟಕ ಹಾಗೂ ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜು- ಸಂಯುಕ್ತ ಆಶ್ರಯದಲ್ಲಿ ‘ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು’ ಉಪನ್ಯಾಸ ಮಾಲೆ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1 ಕಾರ್ಯಕ್ರಮವು ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 26 ಜೂನ್ 2025ರಂದು  ನಡೆಯಿತು.

    ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಮೋಹನ ಗೌಡ ನೆರವೇರಿಸಿ ಎಲ್ಲಾ ಉಪನ್ಯಾಸಮಾಲೆ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಜಿರೆ ಶ್ರೀ ಧ.ಮ. ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ. ದಿವ ಕೊಕ್ಕಡ ಮಾತನಾಡಿ “ಕುವೆಂಪು ಅವರ ಜೀವನ ಹಾಗೂ ಸಾಹಿತ್ಯ ಇಂದಿನ ಗ್ರಾಮೀಣ ಬದುಕಿಗೆ ಹಿಡಿದ ಕೈಗನ್ನಡಿಯಂತಿದೆ. ಜಾತಿ, ಧರ್ಮ, ಮೇಲು-ಕೀಳು ಎಂಬ ಬೇಧ-ಭಾವವಿಲ್ಲದೆ ಕುವೆಂಪು ರವರ ಆಶಯದಂತೆ ವಿಶ್ವ ಮಾನವರಾಗೋಣ” ಎಂಬುದಾಗಿ ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು-ನುಡಿ, ಭಾಷೆ, ಸಾಂಸ್ಕೃತಿಕ ವೈವಿದ್ಯತೆಯನ್ನು ಗುರುತಿಸಿ, ಬೆಳೆಸಲು ಪ್ರೋತ್ಸಾಹಿಸುತ್ತದೆ. ರಾಷ್ಟ್ರ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಕೈಯಾಡಿಸಿ ಭಾಷಾ ಪ್ರೌಡಿಮೆ ಯನ್ನು ಮೆರೆದಿದ್ದಾರೆ” ಎಂದು ಅಭಿಪ್ರಾಯ ಪಟ್ಟರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ
    Next Article ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31
    roovari

    Add Comment Cancel Reply


    Related Posts

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.