ಮಂಗಳೂರು : ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ 20ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ದಿನಾಂಕ 09 ಜನವರಿ 2025ರಂದು ಬೆಳಿಗ್ಗೆ 9-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.
ಈ ಸಮ್ಮೇಳನದಲ್ಲಿ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಹಾಸ್ಯೋತ್ಸವ, ರಸಮಂಜರಿ, ಭಾಷಾ ಸೌಹಾರ್ದಗೋಷ್ಠಿ, ಕವಿಗೋಷ್ಠಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9886510087.