ಮಂಗಳೂರು : ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2023-24ನೇ ಸಾಲಿಗೆ ರಾಷ್ಟ್ರೀಯ ಪ್ರಧಾನ ಮಂತ್ರಿ ‘ಬಾಲ ಪುರಸ್ಕಾರ ಪ್ರಶಸ್ತಿ’ಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕೂಡ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಆನ್ಲೈನ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಾಣಾಧಿಕಾರಿ ತಿಳಿಸಿದ್ದಾರೆ.