ಕಾಸರಗೋಡು : ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೇಖಾ ಸುದೇಶ್ ರಾವ್ ಇವರು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಭವನದ ‘ರಜತ ಸಂಭ್ರಮ’ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮ ಹಾಗೂ ‘ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ ಪುಸ್ತಕ ನಿತ್ಯ’ ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು, ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ ರಜತ ಸಂಭ್ರಮ 2025 ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವಾರ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಾಧಿಕಾರಿ ಸಂಧ್ಯಾ ರಾಣಿ ಟೀಚರ್ ತಿಳಿಸಿದ್ದಾರೆ.