ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಒಂದಾದ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿಯ ಆಶಯದಂತೆ ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಉತ್ತಮ ಪ್ರಬಂಧಕ್ಕೆ ಬಹುಮಾನ ನೀಡುವ ಸಲುವಾಗಿ ವಿದ್ಯಾರ್ಥಿಗಳಿಂದ ಪ್ರಬಂಧವನ್ನು ಸ್ಪರ್ಧೆಗಾಗಿ ಆಹ್ವಾನಿಸಲಾಗಿತ್ತು.
ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ 35 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಕುಮಾರಿ ಮನ ಕೆ.ಆರ್. ರವರು ಪಡೆದಿರುತ್ತಾರೆ. ದ್ವಿತೀಯ ಸ್ಥಾನವನ್ನು ಕೊಟ್ಟಮುಡಿಯ ಮರ್ಕಸ್ ಹಿದಾಯತ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಕುಮಾರಿ ಫಹಿನಾ ಟಿ.ಎ.ರವರು ಪಡೆದುಕೊಂಡರೆ ತೃತೀಯ ಸ್ಥಾನವನ್ನು ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಕುಮಾರಿ ಅನುಷಾ ಪಿ.ಆರ್. ಹಾಗೂ ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಕುಮಾರಿ ಪ್ರೇಕ್ಷ ಜಿ.ಎಂ. ಪಡೆದುಕೊಂಡಿರುತ್ತಾರೆ. ಇವರಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದನೆಗಳು. ಮುಂದಿನ ಕಾರ್ಯಕ್ರಮದಲ್ಲಿ ಇವರಿಗೆ ಬಹುಮಾನ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.
