Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರು ಮಿತ್ರ ಮಂಡಳಿಯ ಪುನಶ್ವೇತನದ ಚಾಲನಾ ಕಾರ್ಯಕ್ರಮ
    Literature

    ಮಂಗಳೂರು ಮಿತ್ರ ಮಂಡಳಿಯ ಪುನಶ್ವೇತನದ ಚಾಲನಾ ಕಾರ್ಯಕ್ರಮ

    July 23, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡೊಂಗರಕೇರಿಯಲ್ಲಿರುವ ಸುಧೀಂದ್ರ ಸಭಾಂಗಣದಲ್ಲಿ ದಿನಾಂಕ 18 ಜುಲೈ 2026ರಂದು ಮಿತ್ರ ಮಂಡಳಿ 2.0 ಪುನಶ್ವೇತನದ ಚಾಲನಾ ಕಾರ್ಯಕ್ರಮವು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಚಂದ್ರಕಲಾ ನಂದಾವರ ಇವರು ಮಾತನಾಡಿ “ಮಂಗಳೂರಿನ ಕೋರ್ಟ್ ಗುಡ್ಡೆಯ ಆಲದ ಮರದಡಿಯಲ್ಲಿ ಸಮಾನ ಸಾಹಿತ್ಯಾಸಕ್ತರು, ಕನ್ನಡ ಭಾಷಾ ಪಂಡಿತರ ಸಾಹಿತ್ಯ ಚರ್ಚೆಯಲ್ಲಿ ಆರಂಭವಾದ ಮಿತ್ರ ಮಂಡಳಿ ಸಾಹಿತ್ಯ ಲೋಕಕ್ಕೆ ದಿಗ್ಗಜ ಸಾಹಿತಿಗಳನ್ನು ನೀಡಿದೆ. ಮಿತ್ರ ಮಂಡಳಿಯಿಂದ ಬಿಡುಗಡೆಯಾದ ಪುಸ್ತಕಗಳು ಚರಿತ್ರೆಯ ಪುಟಗಳಲ್ಲಿ ಶ್ರೇಷ್ಠ ಸಾಹಿತ್ಯ ಪ್ರಕಾರಗಳಾಗಿ ದಾಖಲಾಗಿವೆ. ಇದರಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರ, ವಿದ್ಯಾರ್ಥಿಗಳ ಕೊಡುಗೆ ದೊಡ್ಡದಿದೆ. ಆ ನಿಟ್ಟಿನಲ್ಲಿ ಮಿತ್ರ ಮಂಡಳಿಯನ್ನು ಮತ್ತೇ ಪುನರುಜ್ಜೀವನಗೊಳಿಸುವ ಕಾರ್ಯವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಉತ್ತಮ ಹೆಜ್ಜೆ” ಎಂದು ಶ್ಲಾಘಿಸಿ “ಇತಿಹಾಸ ತಿಳಿದವರು ಮಾತ್ರ ಇತಿಹಾಸ ಸೃಷ್ಟಿಸುತ್ತಾರೆ. ಮಿತ್ರ ಮಂಡಳಿಯ ಆಧಾರ ಸ್ತಂಭಗಳಾಗಿದ್ದ ಜೋಡುಮಠ ವಾಮನ ಭಟ್, ಎಂ.ಎನ್. ಕಾಮತ್, ಪೇಜಾವರ ಸದಾಶಿವ ರಾವ್, ಕಣಂದೂರು ತಿಮ್ಮಯಾಚಾರ್, ಕಣಂದೂರು ರಾಘವಾಚಾ‌ರ್ ಸಹಿತ ಅನೇಕ ಹೆಸರುಗಳನ್ನು ಉದಾಹರಿಸಿದ ಅವರು ಎಲ್ಲರ ಪ್ರಯತ್ನದಿಂದ ಕನ್ನಡ ಸಾಹಿತ್ಯ ಲೋಕ ಶ್ರೀಮಂತವಾಯಿತು. ಅಂದು ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಅನೇಕ ಶಿಕ್ಷಕರು, ವಕೀಲರು ಸಾಹಿತ್ಯದ ಕೃಷಿಗಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಇಂದಿನ ಶಿಕ್ಷಣ ಯುಗದಲ್ಲಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ. ಆದರೆ ಕೆನರಾ ಶಿಕ್ಷಣ ಸಂಸ್ಥೆಯ ಹೊಸ ಪ್ರಯತ್ನ ಮಿತ್ರ ಮಂಡಳಿ 2.0 ಮೂಲಕ ಹೊಸ ಸೃಜನಶೀಲ ಸಮಾಜ ನಿರ್ಮಾಣವಾಗಲಿ, ಸಂಸ್ಕಾರಯುತ ಸಮಾಜಕೈ ಈ ಹೆಜ್ಜೆ ದೊಡ್ಡ ಕೊಡುಗೆ ನೀಡಲಿ” ಎಂದು ಶುಭ ಹಾರೈಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಸಿಎ ಗಿರಿಧರ್ ಕಾಮತ್ ಅವರು ಮಿತ್ರ ಮಂಡಳಿಯ ಹಿಂದಿನ ಶಕ್ತಿ ಎಂ.ಎನ್. ಕಾಮತ್ ಇವರ ಬರವಣಿಗೆಯ ಶೈಲಿ, ಮನಮುಟ್ಟುವಂತೆ ಹೇಳುತ್ತಿದ್ದ ರೀತಿ ಹಾಗೂ ಬಳಸುತ್ತಿದ್ದ ಸಾಹಿತ್ಯದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು. ಕೆನರಾ ಕಾಲೇಜಿನ, ಪ್ರಾಧ್ಯಾಪಕಿ ದೀಪ್ತಿ ನಾಯಕ್ ಅವರು ಇದರ ಉದ್ದೇಶದ ಬಗ್ಗೆ ಮಾತನಾಡಿ, ಪೈಮರಿಯಿಂದ ಡಿಗ್ರಿ ಕಾಲೇಜಿನ ತನಕ ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಬೆಳೆಸಲು ಪೂರಕವಾದ ಚಟುವಟಿಕೆಗಳನ್ನು ಕೆನರಾ ಕಲ್ಬರಲ್ ಅಕಾಡೆಮಿಯ ಮಿತ್ರ ಮಂಡಳಿಯ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.

    ಮಿತ್ರ ಮಂಡಳಿಯ ರೂವಾರಿಗಳಲ್ಲಿ ಒಬ್ಬರಾಗಿದ್ದ ಎಂ.ಎನ್. ಕಾಮತ್ ಇವರು ಕನ್ನಡಕ್ಕೆ ಅನುವಾದಿಸಿದ ರವೀಂದ್ರನಾಥ ಟಾಗೋರ್ ರಚನೆಯ ಗೀತಾಂಜಲಿಯ ಹಾಡು ‘ಎಲ್ಲಿ ಮನಕಳುಕಿರದೋ’ ಕೆನರಾ ಪ್ರಾರ್ಥನಾ ಗೀತೆಯನ್ನು ಮಕ್ಕಳು ಹಾಡಿದರು. ಕೆನರಾ ಕಲ್ಚರಲ್ ಅಕಾಡೆಮಿ ಸಂಚಾಲಕ ಮಂಗಲ್ಪಾಡಿ ನರೇಶ್ ಶೆಣೈ, ಸಾರ್ವಜನಿಕ ಸಂಪರ್ಕಾಧಿಕಾರಿ ಉಜ್ವಲ್ ಮಲ್ಯ, ಮಿತ್ರ ಮಂಡಳಿಯ ರೂಪುರೇಶೆ ಪ್ರಮುಖರುಗಳಾದ ಗುರು ಬಂಟ್ವಾಳಕಾರ್, ವಿಕ್ರಮ್‌ರಾಜ್, ಶಿಕ್ಷಣ ಸಂಸ್ಥೆಯ ಪ್ರಮುಖರು, ಸಾಹಿತ್ಯ ಪ್ರೇಮಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಪ್ರದೀಪ್ ನಿರೂಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಜಯಾನಂದ ಪೆರಾಜೆ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ’
    Next Article ಕಾಂತಾವರದಲ್ಲಿ ಯಕ್ಷದೇಗುಲದ ‘ಯಕ್ಷೋಲ್ಲಾಸ 2026’ | ಜುಲೈ 26
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026

    ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 02

    July 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.