Subscribe to Updates

    Get the latest creative news from FooBar about art, design and business.

    What's Hot

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನಲ್ಲಿ ‘ರೋಟರಿ- ಕದಂಬ ರಂಗ ಪ್ರಶಸ್ತಿ’ ಪ್ರದಾನ ಸಮಾರಂಭ
    Awards

    ಮೈಸೂರಿನಲ್ಲಿ ‘ರೋಟರಿ- ಕದಂಬ ರಂಗ ಪ್ರಶಸ್ತಿ’ ಪ್ರದಾನ ಸಮಾರಂಭ

    January 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ರೋಟರಿ ಮೈಸೂರು ಉತ್ತರ ಹಾಗೂ ಕದಂಬ ರಂಗವೇದಿಕೆ ಇದರ ವತಿಯಿಂದ ‘ರೋಟರಿ- ಕದಂಬ ರಂಗ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 17 ಜನವರಿ 2025ರಂದು ಜೆ.ಎಲ್‌.ಬಿ. ರಸ್ತೆಯ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಲನಚಿತ್ರ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಮಾತನಾಡಿ “ಕನ್ನಡ ರಂಗಭೂಮಿಯು ವಿಶ್ವದಲ್ಲೇ ವಿಶಿಷ್ಟ ಗೌರವಕ್ಕೆ ಪಾತ್ರವಾಗಿದ್ದು, ಅದಕ್ಕೆ ಇಲ್ಲಿನ ಮಣ್ಣಿನ ಗುಣ ಹಾಗೂ ಜಾನಪದ ಕಾರಣ. ಮೈಸೂರಿನಲ್ಲಿ ರಾಜರ ಕಾಲದಿಂದ ನಾಟಕಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಗುಬ್ಬಿ ವೀರಣ್ಣ ಕಂಪನಿಯನ್ನು ಕರೆಸಿ, ಜಗನ್ಮೋಹನ ಅರಮನೆಯಲ್ಲಿ ರಾಜರು ನಾಟಕ ಮಾಡಿಸಿ ಪ್ರೋತ್ಸಾಹಿಸಿದ್ದರು. ಈಗಲೂ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿದರೆ ಜನ ಬೆಂಬಲ ನೀಡುತ್ತಾರೆ. ಉತ್ತಮ ನಾಟಕಕ್ಕೆ ಸೋಲೇ ಇಲ್ಲ. ಜನ ಬರುತ್ತಾರೆ. ಸುಳ್ಳನ್ನು ಹೇಳುತ್ತಲೇ ಸತ್ಯವನ್ನು ಅನಾವರಣ ಮಾಡುವ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ರಂಗಭೂಮಿ ಮಾಡುತ್ತಿದೆ. ಆ ಮೂಲಕ ಉತ್ತಮ ಸಂಸ್ಕಾರ ರೂಪಿಸಲು ನೆರವಾಗುತ್ತಿದೆ. ರೋಟರಿ ಸಂಸ್ಥೆಯವರು ಕೇವಲ ಇಂಗ್ಲೀಷ್ ಕಾರ್ಯಕ್ರಮಗಳಿಗೆ ಸೀಮಿತವಾಗದೇ ಕಲೆ, ಕಲಾವಿದರಿಗೂ ಪ್ರೋತ್ಸಾಹ ನೀಡುತ್ತಿರುವುದು ಸ್ವಾಗತಾರ್ಹ” ಎಂದು ಹೇಳಿದರು.

    ನಟ ನಿರ್ದೇಶಕ ಯು.ಎಸ್. ರಾಮಣ್ಣ, ನಟ ಪ್ರಸಾಧನ ಪಟು ವಿನ್ಯಾಸಕ ಅಶ್ವತ್ಥ್ ಕದಂಬ, ನಟ ನಿರ್ದೇಶಕ ಎನ್. ಧನಂಜಯ ಹಾಗೂ ನಟಿ ನಿರ್ದೇಶಕಿ ಗಾಯಕಿ ದಿಶಾ ರಮೇಶ್ ಇವರುಗಳಿಗೆ ‘ರೋಟರಿ- ಕದಂಬ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರದಾನ ಮಾಡಿದರು. ರೋಟರಿ ಉತ್ತರ ಅಧ್ಯಕ್ಷ ಪಿ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಎಲ್.ಆರ್. ಮಹದೇವ ಸ್ವಾಮಿ ಉಪಸ್ಥಿತರಿದ್ದರು. ಕದಂಬ ರಂಗವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ಸ್ವಾಗತಿಸಿ, ಶಿವಕುಮಾರ್ ನಿರೂಪಿಸಿದರು.

    award drama theatre
    Share. Facebook Twitter Pinterest LinkedIn Tumblr WhatsApp Email
    Previous Articleಅಜೂರ ತೋಟದ ಮಹಾಮನೆಯಲ್ಲಿ ‘ಗಂಗಾರಾಮೋತ್ಸವ ಮತ್ತು ಪ್ರಶಸ್ತಿ’ ಪ್ರದಾನ ಸಮಾರಂಭ | ಜನವರಿ 26
    Next Article ಬಿ.ಸಿ. ರೋಡಿನಲ್ಲಿ ‘ಉದಯ ಗಾನ’ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ | ಜನವರಿ 26 
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ | ಫೆಬ್ರವರಿ 20

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.