ಪುತ್ತೂರು : ನಾಡಿನ ಹೆಸರಾಂತ ಸಾಹಿತಿ ಎಸ್. ಎಲ್ ಭೈರಪ್ಪ ಇವರ ನಿಧನದ ಹಿನ್ನೆಲೆಯಲ್ಲಿ ಇವರಿಗೆ ದಿನಾಂಕ 27 ಸೆಪ್ಟೆಂಬರ್ 2025ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನುಡಿನಮನವನ್ನು ಸಲ್ಲಿಸಲಾಯಿತು.
ಸಭೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಮಾತನಾಡಿ “ಕನ್ನಡ ಸಾಹಿತ್ಯ ಲೋಕದ ಧೀಮಂತ ಸಾಹಿತಿ ಹಾಗೂ ಭಾರತೀಯ ಪರಂಪರೆಯ ಧೋರಣೆಗಳನ್ನು ನಾಡಿನಾದ್ಯಂತ ಬೆಳಗಿದ ‘ಸರಸ್ವತಿ ಸಮ್ಮಾನ್’ ಹಾಗೂ ‘ಪದ್ಮಭೂಷಣ’ ಪುರಸ್ಕೃತ ಸಾಹಿತಿಗಳಾದ ಡಾ. ಎಸ್. ಎಲ್. ಭೈರಪ್ಪನವರ ಅಗಲುವಿಕೆ ಕನ್ನಡ ನಾಡಿಗೆ ಭರಿಸಲಾಗದ ನಷ್ಟ” ಎಂದು ನುಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಸಾಹಿತಿ ಡಾ. ಎಸ್.ಎಲ್ ಭೈರಪ್ಪನವರಿಗೆ ನುಡಿನಮನ
No Comments1 Min Read
Previous Articleಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ