Subscribe to Updates

    Get the latest creative news from FooBar about art, design and business.

    What's Hot

    ವಿಪ್ರ ವೇದಿಕೆಯ ದಶಮಾನೋತ್ಸವ ಸಮಾರೋಪ ಸಮಾರಂಭ | ಆಗಸ್ಟ್ 16

    August 14, 2026

    ಮಲ್ಲಿಕಟ್ಟೆಯಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 16

    August 14, 2026

    ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಎಸ್. ಆರ್. ರಂಗನಾಥನ್ ದಿನಾಚರಣೆ

    August 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಎಸ್. ಆರ್. ರಂಗನಾಥನ್ ದಿನಾಚರಣೆ
    Literature

    ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಎಸ್. ಆರ್. ರಂಗನಾಥನ್ ದಿನಾಚರಣೆ

    August 14, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ದಿನಾಂಕ 12 ಆಗಸ್ಟ್ 2026ರಂದು ರಂಗನಾಥನ್‌ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಂ.ಜಿ.ಎಂ. ಕಾಲೇಜಿನ ಗ್ರಂಥಪಾಲಕರಾದ ಕಿಶೋರ್‌ ಕುಮಾರ್ “ನವಭಾರತದ ಗ್ರಂಥಾಲಯದ ಪರಿಕಲ್ಪನೆಗೆ ಹೊಸದಿಕ್ಕನ್ನು ಕಲ್ಪಿಸಿಕೊಟ್ಟ ಕೀರ್ತಿ ಡಾ. ಎಸ್.ಆರ್. ರಂಗನಾಥನ್‌ ಅವರಿಗೆ ಸಲ್ಲುತ್ತದೆ. ಅವರು ಮೂಲತ: ಗಣಿತ ಶಾಸ್ತ್ರದ ಪ್ರಾಧ್ಯಾಪಕರು. ಅವರ ಅದಮ್ಯವಾದ ಪುಸ್ತಕ ಪ್ರೀತಿ ಅವರನ್ನು (ಭಾರತದ ಗ್ರಂಥಾಲಯ ವಿಜ್ಞಾನ) ಗ್ರಂಥಾಲಯ ವಿಜ್ಞಾನದ ಪಿತಾಮಹನನ್ನಾಗಿ ರೂಪಿಸಿದೆ. ಅವರು ಅಂದು ರೂಪಿಸಿದ ವ್ಯವಸ್ಥೆಯಿಂದಾಗಿ ಶಾಲಾ ಕಾಲೇಜುಗಳಲ್ಲಿ, ಸಂಶೋಧನಾ ಕೇಂದ್ರಗಳಲ್ಲಿ ಗ್ರಂಥಾಲಯ ಆಧುನಿಕ ವ್ಯವಸ್ಥೆಯೊಂದಿಗೆ ಪರಿವರ್ತನೆಗೊಂಡಿದೆ. ಡಾ. ಎಸ್.ಆರ್. ರಂಗನಾಥನ್‌ ಅವರು 12 ಅಗೋಸ್ಟ್ 1892ರಲ್ಲಿ ಜನಿಸಿದರು. ಅವರ ಕೊಡುಗೆಗಳೆಂದರೆ ಗ್ರಂಥಾಲಯದ ಪಂಚಸೂತ್ರಗಳು ಮತ್ತು ಕೊಲೊನ್ ವರ್ಗೀಕರಣ. ಗ್ರಂಥಾಲಯದ ಬಗ್ಗೆ ಮಾಡಿದ ಸಾಧನೆ, ನೀಡಿದ ಕೊಡುಗೆ ಹಾಗೂ ಅವರ ಸೇವೆಗಾಗಿ ಅವರನ್ನು ಗ್ರಂಥಾಲಯದ ಪಿತಾಮಹ ಎಂದು ಕರೆಯುತ್ತಾರೆ. ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಆಗಿ ಆಚರಿಸಲಾಗುತ್ತದೆ” ಎಂದರು.

    ಎಂ.ಜಿ.ಎಂ. ಕಾಲೇಜಿನ ಗಾಂಧಿಯನ್‌ ಅಧ್ಯಯನ ಕೇಂದ್ರದ ನಿರ್ದೇಶಕರಾದ ಶ್ರೀ ವಿನಿತ್‌ ರಾವ್, ಆರ್.ಆರ್.ಸಿ. ಸಹ ಸಂಶೋಧಕ ಡಾ. ಎಸ್.ಆರ್. ಅರುಣ್‌ಕುಮಾರ್ ಉಪಸ್ಥಿತರಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’ | ಆಗಸ್ಟ್ 16
    Next Article ಮಲ್ಲಿಕಟ್ಟೆಯಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 16
    roovari

    Add Comment Cancel Reply


    Related Posts

    ವಿಪ್ರ ವೇದಿಕೆಯ ದಶಮಾನೋತ್ಸವ ಸಮಾರೋಪ ಸಮಾರಂಭ | ಆಗಸ್ಟ್ 16

    August 14, 2026

    ಮಲ್ಲಿಕಟ್ಟೆಯಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 16

    August 14, 2026

    ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’ | ಆಗಸ್ಟ್ 16

    August 14, 2026

    ರಾಷ್ಟ್ರ – ಭಕ್ತಿ ಉದ್ಧೀಪನಾ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ಸ್ಫರ್ಧೆಗಳು

    August 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.