Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ‘ಸಾಹಿತ್ಯ ಸುಗ್ಗಿ’ 
    Book Release

    ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ‘ಸಾಹಿತ್ಯ ಸುಗ್ಗಿ’ 

    July 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಗಳೂರು : ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಮತ್ತು ಕಥಾಬಿಂದು ಪ್ರಕಾಶನ ಮಂಗಳೂರು ಇದರ ಸಹಯೋಗದಲ್ಲಿ ‘ಸಾಹಿತ್ಯ ಸುಗ್ಗಿ’ ಕಾರ್ಯಕ್ರಮವು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ‘ಸಾನಿಧ್ಯ’ ಸಭಾಂಗಣದಲ್ಲಿ 27 ಜುಲೈ2024 ರಂದು ನೆರವೇರಿತು.
    ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಆಲ್ವೇನ್ ಡಿ’ಸೋಜಾ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಮಾಹಿತಿ ಮತ್ತು ತಂತ್ರ ಜ್ಞಾನ ಇಂಜಿನಿಯರ್ ಆದ  ಶ್ರೀ ಬಿ. ಮಹಾಬಲ ತಿಲಕ ಇವರು  ಬಿ. ಸತ್ಯವತಿ ಭಟ್ ಕೊಳ್ಚಪ್ಪು ವಿರಚಿತ ‘ಮತ್ತೆ ನಕ್ಕಳು ಪ್ರಕೃತಿ’ ಕೃತಿ ಬಿಡುಗಡೆ ಗೊಳಿಸಿದರು. ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ ಸ್ಥಾಪಕ ಅಧ್ಯಕ್ಷ ವಾಮನ್ ರಾವ್ ಬೇಕಲ್ ಹಾಗೂ ಕನ್ನಡ ಭವನ ಪ್ರಕಾಶನದ ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ಇವರಿಗೆ ಕೃತಿ ಕರ್ತೃ ಬಿ. ಸತ್ಯವತಿ ಭಟ್ ಕೊಳ್ಚಪ್ಪೆ ಕೃತಿಯ ಪ್ರತಿ ನೀಡುವ ಮೂಲಕ ಲೋಕಾರ್ಪಣೆ ಗೊಳಿಸಲಾಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ವಸಂತ್ ಕುಮಾರ್ ಪೆರ್ಲ, ಕನ್ನಡ ಪ್ರಾಧ್ಯಾಪಕರಾದ ಡಾ. ವಿಶ್ವನಾಥ್ ಬದಿಕಾನ,  ಕಥಾಬಿಂದು ಪ್ರಕಾಶನದ ಪ್ರದೀಪ್ ಕುಮಾರ್, ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಉಪಸ್ಥಿತರಿದ್ದರು.
    ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ಕೃತಿ ಪರಿಚಯ ಮಾಡಿದರು. ನಿವೃತ್ತ ಪ್ರಾಧ್ಯಾಪಕರಾದ ಗುಣಾಜೆ ರಾಮಚಂದ್ರ ಭಟ್ ಆಶಯ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ  ಲಕ್ಷ್ಮಿ ವಿ. ಭಟ್ ಇವರನ್ನು ಸನ್ಮಾನಿಸಲಾಯಿತು. ಖ್ಯಾತ ಗಝಲ್ ಕವಿಗಳಾದ ಡಾ ಸುರೇಶ್ ನೆಗಳಗುಳಿ ಇವರ  ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕೃತಿಯ ಕರ್ತೃ ಕೊಳ್ಚಪ್ಪೆ ಬಿ. ಸತ್ಯವತಿ ಭಟ್ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಯಕ್ಷ ಶಿಕ್ಷಣ” ಪ್ರಾರಂಭೋತ್ಸವ
    Next Article ಕುಂದಗನ್ನಡ ಕಥೆಗಳ ಆಹ್ವಾನ | 4 ಆಗಸ್ಟ್
    roovari

    Comments are closed.

    Related Posts

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕನ್ನಡ ಕಂಪು ಸರಣಿ -9’

    February 19, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.