Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ
    Literature

    ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ

    January 31, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ದಿನಾಂಕ 02-12-2023ರಂದು ಉದ್ಘಾಟನೆಗೊಂಡಿದೆ. ಕುಮಾರ ಶಿವಕುಮಾರ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು “ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ” ಎಂದರು.

    ಇದೇ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ‘ಘಮ ಘಮಿಸುವ ಗುಟ್ಟು’ ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಕುಮಾರಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಕು.ಶ್ರುತಿಕಾ ಹೇಳಿದರು.

    ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಉಜಿರೆಯವರು “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ‘ಮಕ್ಕಳೆಡೆಗೆ ಸಾಹಿತ್ಯ’ ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ‘ಘಮ ಘಮಿಸುವ ಗುಟ್ಟು’ ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ” ಎಂದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು “ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾ ಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ” ಎಂದರು.

    ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಸ್ತಾವನೆ ಮಾತು ಹೇಳಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.

    ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫೂರ್ತಿ ಗೀತೆ ಹಾಡಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ನಿರೂಪಿಸಿ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿ, ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬಯಿ ವಿಶ್ವವಿದ್ಯಾಲಯದ ಜೆ.ಪಿ. ನಾಯಕ್ ಭವನದಲ್ಲಿ ವ್ಯಾಸರಾಯ ಬಲ್ಲಾಳ ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ ಮತ್ತು ಉಪನ್ಯಾಸ
    Next Article ರಂಗ ವಿಸ್ಮಯ ನಾಟಕ ತಂಡದಿಂದ ‘ಅಭಿನಯ ತರಬೇತಿ’
    roovari

    Add Comment Cancel Reply


    Related Posts

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.