Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಯಕ್ಷ ಸಪ್ತೋತ್ಸವ’ದ ಸಮಾರೋಪದಲ್ಲಿ ರಾಮಚಂದ್ರ ಐತಾಳರಿಗೆ ‘ಸದಾನಂದ ಪ್ರಶಸ್ತಿ’ ಪ್ರದಾನ
    Awards

    ‘ಯಕ್ಷ ಸಪ್ತೋತ್ಸವ’ದ ಸಮಾರೋಪದಲ್ಲಿ ರಾಮಚಂದ್ರ ಐತಾಳರಿಗೆ ‘ಸದಾನಂದ ಪ್ರಶಸ್ತಿ’ ಪ್ರದಾನ

    November 5, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಂಗಾರಕಟ್ಟೆ : ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ ಕಲಾಕೇಂದ್ರದ ಸಂಸ್ಥಾಪಕ ದಿ. ಐರೋಡಿ ಸದಾನಂದ ಹೆಬ್ಬಾರರ ಸಂಸ್ಮರಣೆ, ಸದಾನಂದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಪ್ತೋತ್ಸವದ ಸಮಾರೋಪ ಸಮಾರಂಭವು ದಿನಾಂಕ 27 ಅಕ್ಟೋಬರ್ 2024ರಂದು ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ನಡೆಯಿತು.

    ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ ಜೋಶಿ ಮಾತನಾಡಿ, “ಯಕ್ಷಗಾನ ಕ್ಷೇತ್ರಕ್ಕೆ ಸದಾನಂದ ಹೆಬ್ಬಾರ್ ಇವರ ಕೊಡುಗೆ ಮಹತ್ವದ್ದು. ಯಕ್ಷಗಾನ ಕಲಾಕೇಂದ್ರದ ಮೂಲಕ ಸಾವಿರಾರು ಉತ್ತಮ ಶಿಷ್ಯರನ್ನು ಅವರು ತಯಾರು ಮಾಡಿದ್ದು, ಕಲೆಯ ಮೂಲ ಸತ್ವವನ್ನು ಉಳಿಸಿಕೊಂಡು ಮಂದೆ ಸಾಗಬೇಕಾದರೆ ಇಂತಹ ಕೇಂದ್ರಗಳು ಅಗತ್ಯ” ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದರ್ ಮಾತನಾಡಿ, “ಈ ಸಂಸ್ಥೆಯು 50 ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದ ಅಸ್ತಿತ್ವಕ್ಕೆ ತೊಡಕಾಗಬಾರದು ಎನ್ನುವುದು ಎಲ್ಲಾ ಕಲಾಸಕ್ತರ ಆಶಯ. ಹೀಗಾಗಿ ಕನಿ಼ಷ್ಠ ರೂ. ಎರಡು ಕೋಟಿಯನ್ನು ಕಲಾಭಿಮಾನಿಗಳ ಸಹಕಾರದಿಂದ ಠೇವಣಿ ಇಟ್ಟು, ಅದರ ಬಡ್ಡಿ ಮೊತ್ತದಲ್ಲಿ ನಿರಂತರ ಕಾರ್ಯಕ್ರಮ ಆಯೋಜಿಸುವ ಯೋಚನೆ ಕೇಂದ್ರಕ್ಕಿದೆ” ಎಂದರು.

    ಒ.ಎನ್.ಜಿ.ಸಿ ಸಂಸ್ಥೆಯ ನಿವೃತ್ತ ಮಹಾಪ್ರಬಂಧಕ ಬನ್ನಾಡಿ ನಾರಾಯಣ ಆಚಾರ್ಯ, ಕಲಾ ಕೇಂದ್ರದೊಂದಿಗೆ ತನ್ನ ಒಡನಾಟ ಮೆಲುಕು ಹಾಕಿದರು. ಈ ಸಂಧರ್ಭ ಶಿಕ್ಷಕ, ರಂಗಭೂಮಿ ಕಲಾವಿದ, ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಇವರಿಗೆ ಸದಾನಂದ ಹೆಬ್ಬಾರರ ನೆನಪಿನಲ್ಲಿ ಕಳೆದ 24 ವರ್ಷಗಳಿಂದ ನೀಡುತ್ತಾ ಬಂದಿರುವ ‘ಸದಾನಂದ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಹುಬ್ಬಳ್ಳಿಯ ಹೋಟೆಲ್ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಯಕ್ಷ ಕಲಾಸಕ್ತ ಶಂಕರ ಐತಾಳ, ಸಾಲಿಗ್ರಾಮ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಎ.ಪಿ. ಐತಾಳ ಉಪಸ್ಥಿತರಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ, ಅಂಬರೀಷ್ ಭಟ್ ಸಂಸ್ಮರಣಾ ಭಾಷಣ ಮಾಡಿದರು. ಚಿತ್ರಪಾಡಿ ಉಪೇಂದ್ರ ಸೋಮಯಾಜಿ, ಸನ್ಮಾನಿತರ ಪರಿಚಯ ನೀಡಿದರು. ಮೇಘ ಶ್ಯಾಮ ಹೆಬ್ಬಾರ್ ನಿರೂಪಿಸಿ, ಹೆರೆಂಜಾಲು ಪ್ರಶಾಂತ್ ಮಯ್ಯ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ‘ಕೃಷ್ಣ ಪರಂದಾಮ’ ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ‘ಲಹರಿ’ ಸ್ಮರಣ ಸಂಚಿಕೆ
    Next Article ಮಕ್ಕಳ ಕಲಾ ಲೋಕದ ಬಾಲಬಂಧು ಪ್ರಶಸ್ತಿಗೆ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆ | ನವಂಬರ್ 19
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.