ಉಪ್ಪಿನಂಗಡಿ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ‘ಸಾಹಿತ್ಯ ಸಂಜೆ’ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿನಿಧಿ ಉಪನ್ಯಾಸ ಹಾಗೂ ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭವು ದಿನಾಂಕ 18-02-2024ರಂದು ಉಪ್ಪಿನಂಗಡಿಯ ಪಂಜಳದ ಸುಧಾಮ ಮನೆಯಂಗಳದ ಮಣಿಮಂಟಪ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿದ್ವಾಂಸರಾದ ಡಾ. ತಾಳ್ತಜೆ ವಸಂತ ಕುಮಾರ ಕಾರ್ಯಕ್ರಮ ಉದ್ಘಾಟಿಸಲಿರುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿಯವರು ‘ಮಹಾಭಾರತದ ಅನುಸಂಧಾನ’ ಎಂಬ ವಿಷಯದಲ್ಲಿ ದತ್ತಿ ನಿಧಿ ಉಪನ್ಯಾಸ ನೀಡಲಿದ್ದು, ಡಾ. ವರದರಾಜ ಚಂದ್ರಗಿರಿ ಇವರು ಲಕ್ಷ್ಮೀಶ ತೋಳ್ಪಾಡಿಯವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಮಹಾಭಾರತದ ಅನುಸಂಧಾನ’ದ ಕೃತಿ ಪರಿಚಯ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಕಸಾಪ ಪುತ್ತೂರು ಇದರ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ಮೊದಲಿಗೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಸ್ವಾತಿ ಎನ್.ಎಸ್. ಇವರಿಂದ ‘ಗೀತಾ ಗುಂಜನ’ ಕಾರ್ಯಕ್ರಮ ನಡೆಯಲಿರುವುದು.