ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ 106ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 27 ಜೂನ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಮಂಗಳೂರಿನ ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಯಕ್ ರೂಪಸಿಂಗ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜನಪದ ವಿದ್ವಾಂಸ ವಾಗ್ಮಿ ಹಾಗೂ ಲೇಖಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಮತ್ತು ನಿವೃತ್ತ ಪ್ರದ್ಯಾಪಕಿ ಹಾಗೂ ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.