ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ -1’ ಕಾರ್ಯಕ್ರಮವನ್ನು ದಿನಾಂಕ 14 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ದೇಲಂಪಾಡಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಯಕ್ಷಗಾನ ಗುರುಗಳಾದ ವಿಶ್ವವಿನೋದ ಬನಾರಿ ಇವರು ಉದ್ಘಾಟನೆ ಮಾಡಲಿದ್ದಾರೆ. ನಿವೃತ್ತ ಶಿಕ್ಷಕ ವಿ.ಬಿ. ಕುಳಮರ್ವ ಮತ್ತು ಸಾಹಿತಿ ವಿರಾಜ್ ಅಡೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.