ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಹಂಪನ್‌ಕಟ್ಟಾದ ಎಂ.ಸಿ.ಸಿ. ಬ್ಯಾಂಕ್ ಲಿ. ಇದರ ಸಭಾಂಗಣದಲ್ಲಿ ದಿನಾಂಕ 19 ಅಕ್ಟೋಬರ್ 2025ರಂದು ಅಪರಾಹ್ನ 10-30 ಗಂಟೆಗೆ ‘ಸಾಹಿತ್ಯ ಭಂಡಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಕೊಂಕಣಿ ಸಾಹಿತಿಗಳು ಬರೆದ ಕೊಂಕಣಿಯ 9 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ವಹಿಸಿಕೊಳ್ಳಲಿರುವರು. ಜವಹರ್‌ಲಾಲ್ ನೆಹರು ವಿಶ್ವವಿದ್ಯಾಲಯ ನ್ಯೂಡೆಲ್ಲಿ ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸರ್ ವಲೇರಿಯನ್ ರೊಡ್ರಿಗಸ್‌ರವರು ಮುಖ್ಯ ಅತಿಥಿಗಳಾಗಿ ಹಾಗೂ ದಾಯ್ಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊರವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕೊಂಕಣಿ ಅಕಾಡೆಮಿಯು ಹಮ್ಮಿಕೊಂಡ ಕಾದಂಬರಿ ಹಾಗೂ ಕಿರು ನಾಟಕಗಳನ್ನು ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿರುವುದು. ಈ ಸ್ಪರ್ಧೆಯ ನಗದು ಬಹುಮಾನವನ್ನು ಎಂ.ಸಿ.ಸಿ. ಬ್ಯಾಂಕ್ ಪ್ರಾಯೋಜಕತ್ವದಲ್ಲಿ ವಿತರಿಸಲಾಗುವುದು.