Subscribe to Updates

    Get the latest creative news from FooBar about art, design and business.

    What's Hot

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ
    Competition

    ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

    May 6, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ದಿನಾಂಕ 05 ಮೇ 2026ರಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ನಡೆದ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ಕಾರ್ಯಕ್ರಮವು ಜನಸಾಮಾನ್ಯರ ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾಯಿತು.

    ಕಾರ್ಯಕ್ರಮವನ್ನು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಘಟಕದ ಮೇಲ್ವಿಚಾರಕರಾದ ಶ್ರೀ ಪೂರ್ಣೇಶ್ ಅವರು ಉದ್ಘಾಟಿಸಿ, ಪರಿಷತ್ತಿನ ಈ ವಿಭಿನ್ನ ಪ್ರಯತ್ನಕ್ಕೆ ಶುಭ ಹಾರೈಸಿದರು. ಪುತ್ತೂರು ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಾದ ಶ್ರೀ ಭಾಸ್ಕರ ಶೆಟ್ಟಿ ಹಾಗೂ ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಅಬ್ದುಲ್ ಸಮದ್ ಭಾವ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

    ಕ.ಸಾ.ಪ. ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಗಡಿನಾಡ ಧ್ವನಿ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ.) ಸಂಸ್ಥಾಪಕರಾದ ಡಾ. ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ಇವರು ಆಶಯ ನುಡಿಗಳನ್ನಾಡುತ್ತಾ, “ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಪಂಡಿತರಿಗೆ ಸೀಮಿತವಾಗದೆ, ಜನಸಾಮಾನ್ಯರ ಮನೆ-ಮನಗಳನ್ನು ತಲುಪಿದಾಗ ಮಾತ್ರ ಸಂಸ್ಥಾಪಕರ ಕನಸು ನನಸಾಗಲು ಸಾಧ್ಯ. ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳದಲ್ಲಿ ಪುಸ್ತಕಗಳನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಮುಂದಿನ ಪೀಳಿಗೆಯಲ್ಲಿ ಓದುವ ಸಂಸ್ಕೃತಿಯನ್ನು ಬಿತ್ತುವ ಕೆಲಸ ಮಾಡುತ್ತಿದೆ” ಎಂದು ತಿಳಿಸಿ ಶುಭ ಹಾರೈಸಿದರು.

    ರಂಗಕರ್ಮಿಗಳಾದ ಶ್ರೀ ರಂಗಯ್ಯ ಬಲ್ಲಾಳ್ ಇವರು ಕನ್ನಡ ರಸಪ್ರಶ್ನೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಆಕರ್ಷಕವಾಗಿ ನಡೆಸಿಕೊಟ್ಟರು. ಇವರ ಪ್ರಶ್ನೆಗಳಿಗೆ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಮುಗಿಬಿದ್ದು ಉತ್ತರಿಸಿದರು. ಸುಮಾರು 500ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ರಸಪ್ರಶ್ನೆಯಲ್ಲಿ ಭಾಗವಹಿಸಿ ಪುಸ್ತಕಗಳನ್ನು ಬಹುಮಾನವಾಗಿ ಪಡೆದುಕೊಂಡು ಸಂಭ್ರಮಿಸಿದರು.

    ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಶಂಕರಿ ಶರ್ಮ ಇವರು ಅತಿಥಿಗಳನ್ನು ಸ್ವಾಗತಿಸಿ, ಅತ್ಯಂತ ಸುಂದರವಾಗಿ ನಿರೂಪಿಸಿದರು. ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಈ ಕಾರ್ಯಕ್ರಮವು ಕೇವಲ ಮನೋರಂಜನೆಯಾಗಿರದೆ, ಜ್ಞಾನದ ಹಬ್ಬವಾಗಿಯೂ ಮೂಡಿಬಂತು. ಪ್ರತಿಯೊಬ್ಬ ಪ್ರಯಾಣಿಕರ ಕೈಯಲ್ಲಿ ಟಿಕೆಟಿನ ಜೊತೆಗೆ ಕನ್ನಡ ಪುಸ್ತಕಗಳು ರಾರಾಜಿಸುತ್ತಿತ್ತು. ಸಾಹಿತ್ಯ ಪರಿಷತ್ತಿನ ಈ ವಿನೂತನ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    baikady competition kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಆಲಿಸುವುದರಿಂದ ಏಕಾಗ್ರತೆ ಹೆಚ್ಚುತ್ತದೆ – ಸಾಧ್ವಿ ಶ್ರೀ ಮಾತಾನಂದಮಯಿ
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 08
    roovari

    Add Comment Cancel Reply


    Related Posts

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.