ಮಂಗಳೂರು : ಕಥಾಬಿಂದು ಪ್ರಕಾಶನ ಇದರ ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯೋತ್ಸವ’ವನ್ನು ದಿನಾಂಕ 26 ಅಕ್ಟೋಬರ್ 2025ರಂದು ಮಂಗಳೂರು ದೇರಳಕಟ್ಟೆಯಲ್ಲಿರುವ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸೌರಭ ರತ್ನ, ಸಮಾಜ ಸೇವಾರತ್ನ, ‘ಚೈತನ್ಯ ಶ್ರೀ’, ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಈ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಿದ್ದಾರೆ. ಯುಗಪುರುಷ ಮಾಸ ಪತ್ರಿಕೆಯ ಸಂಪಾದಕರಾದ ಭುವನಾಭಿರಾಮ ಉಡುಪ ಇವರು ಸ್ಮರಣ ಸಂಚಿಕೆ ಬಿಡುಗಡೆ ಮತ್ತು ವಿ.ಬಿ. ಕುಳಮರ್ವ ಇವರು ಕೃತಿಗಳ ಅನಾವರಣ ಮಾಡಲಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿಜಯಪುರ ನಾಟ್ಯಕಲಾ ನೃತ್ಯ ಅಕಾಡೆಮಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀಮತಿ ಪುಷ್ಪ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ನೃತ್ಯ ವೈಭವ ಮತ್ತು ಗಡಿನಾಡ ಜಾನಪದ ಮಹಿಳಾ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

