ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕ ಇವರ ವತಿಯಿಂದ ‘ಸಂಸ್ಕೃತಿ ಚಿಂತನ ಸಮಾರಂಭ’ವನ್ನು ದಿನಾಂಕ 16 ನವೆಂಬರ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮೂಡುಬಿದಿರೆ ಕಲ್ಲಬೆಟ್ಟು ಮುರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಇವರು ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಇವರು ಶುಭ ನುಡಿಗಳನ್ನಾಡಲಿದ್ದಾರೆ. ‘ಮಾನವ ಜನ್ಮ – ಮಾನವ ಧರ್ಮ’ ಎಂಬ ವಿಷಯದ ಬಗ್ಗೆ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢ ಶಾಲೆಯ ಪ್ರಧಾನ ಅಧ್ಯಾಪಕರಾದ ದಿನಕರ ಕುಂಭಾಶಿ ಇವರು ಉಪನ್ಯಾಸ ನೀಡಲಿದ್ದಾರೆ.

