ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ಸ್ವಾತಂತ್ರ್ಯೋತ್ಸವದ ಶುಭಾಶಯಗಳೊಂದಿಗೆ ಸನಾತನ ನಾಟ್ಯಾಲಯದ ನೃತ್ಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ಭರತನಾಟ್ಯ ವೈವಿಧ್ಯ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 17 ಆಗಸ್ಟ್ 2024ರಂದು ಸಂಜೆ ಗಂಟೆ 6-00ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಶ್ರೀಮತಿ ರೇವತೀ ಸುನೀಲ್ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ‘ಲಕ್ಷ್ಮೀಯೂ ಅವಳೇ ದುರ್ಗೆಯೂ ಅವಳೇ’ ಎಂಬ ವಿಷಯದ ಬಗ್ಗೆ ಕಾರ್ಕಳದ ಕುಮಾರಿ ಅಕ್ಷಯಾ ಗೋಖಲೆ ಇವರು ಮುಖ್ಯ ಭಾಷಣ ಮಾಡಲಿರುವರು. ಸಭಾ ಕಾರ್ಯಕ್ರಮದ ಬಳಿಕ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಇವರ ಶಿಷ್ಯೆಯರಿಂದ ಭರತನಾಟ್ಯ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.