Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಎರಡನೇ ದಿನದ ಕಾರ್ಯಕ್ರಮ
    Drama

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಎರಡನೇ ದಿನದ ಕಾರ್ಯಕ್ರಮ

    February 24, 2026Updated:February 28, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ‘ರಂಗಹಬ್ಬ-14’ರ ಎರಡನೇ ದಿನದ ಕಾರ್ಯಕ್ರಮವು ದಿನಾಂಕ 23 ಫೆಬ್ರವರಿ 2026ರಂದು ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಟ ಲಕ್ಷ್ಮೀ ಸೋಮಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ. ಸುನೀತಾ ವಿ. “ನಾಟಕ ಸೇರಿದಂತೆ ರಂಗಭೂಮಿಯು ಸಮಾಜದ ಪ್ರತಿಬಿಂಬ. ಎಲ್ಲ ಆಗುಹೋಗುಗಳಿಗೆ ಹಿಡಿವ ಕನ್ನಡಿ. ಸಿನಿಮಾಗಳು ಯಾವ ಸಂದೇಶವನ್ನು ಸಾರುತ್ತಿವೆ ಎಂದು ನೋಡಿದರೆ ಸಂದೇಶಗಳೇ ಕಾಣುತ್ತಿಲ್ಲ. ರೌಡಿಸಂ, ಹೊಡೆದಾಟಗಳೇ ಕಾಣುತ್ತವೆ. ಆದರೆ, ನಾಟಕಗಳು ಆ ರೀತಿಯಲ್ಲಿಲ್ಲ. ಇಂದಿಗೂ ಸಮಾಜದ ಸಮಸ್ಯೆಗಳನ್ನು, ಪಿಡುಗುಗಳನ್ನು ಪ್ರತಿಬಿಂಬಿಸುತ್ತಾ ಚಿಂತನೆಗೆ ಹಚ್ಚುತ್ತವೆ. ಅಲ್ಲದೆ, ಸಿನಿಮಾ ನಟರು ಅನೇಕ ರೀಟೇಕ್ಗ ಳನ್ನು ತೆಗೆದುಕೊಳ್ಳಲು ಅವಕಾಶ ಇರುತ್ತದೆ. ಆದರೆ, ರಂಗಭೂಮಿಯ ಕಲಾವಿದ ರಂಗದ ಮೇಲೆ ನಟಿಸಬೇಕು. ತಪ್ಪಾದರೆ ಅಲ್ಲಿ ರೀಟೇಕ್ ಇರುವುದಿಲ್ಲ. ಎಲ್ಲ ತಯಾರಿಗಳನ್ನು ಮಾಡಿಕೊಂಡು ಪ್ರದರ್ಶನ ನೀಡಬೇಕಾಗುತ್ತದೆ. ಹಾಗಾಗಿ ಶ್ರೇಷ್ಠ ನಟರು ರಂಗಭೂಮಿಯಿಂದ ಹೊರಹೊಮ್ಮುತ್ತಾರೆ” ಎಂದು ವಿಶ್ಲೇಷಿಸಿ “ಈ ಸಾಮಾಜಿಕ ಜಾಲತಾಣದ ಮತ್ತು ಸಿನಿಮೀಯ ಜಗತ್ತಿನಲ್ಲಿ ಪೀಳಿಗೆ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡಿದಾಗ ಆತಂಕವಾಗುತ್ತದೆ. ಇಂಥ ಜಾಗತಿಕ ಸನ್ನಿವೇಶದಲ್ಲಿ ರಂಗಚಟುವಟಿಕೆಯ ಮೂಲಕ ಯುವಸಮುದಾಯವನ್ನು ಸರಿಯಾದ ದಿಕ್ಕಿನಲ್ಲಿ ಸುಮನಸಾ ಒಯ್ಯುತ್ತಿದೆ” ಎಂದು ಶ್ಲಾಘಿಸಿದರು.

    ಕೆನರಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಯು. ಮೋಹನ್ ಉಪಾಧ್ಯಾಯ ಮಾತನಾಡಿ, “ರಂಗಭೂಮಿಯ ಮೂಲ ಭೂಮಿಕೆಯನ್ನು ಬಿಡದೇ ಕಾಲಕ್ಕೆ ತಕ್ಕಂತೆ ನಾಟಕಗಳನ್ನು ರೂಪಿಸಬೇಕು” ಎಂದು ಸಲಹೆ ನೀಡಿದರು. ರಂಗಕರ್ಮಿ ಕೃಷ್ಣ ವಿ. ಸುವರ್ಣ ಮಲ್ಪೆ ಅವರಿಗೆ ರಂಗಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉದ್ಯಮಿ ಆನಂದ ಪಿ. ಸುವರ್ಣ, ಮಲ್ಪೆಯ ಉದ್ಯಮಿ ಸದಾನಂದ ಸಾಲ್ಯಾನ್, ಮಹಾಲಕ್ಷ್ಮೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಸುರೇಶ್ ಬಿ. ಕರ್ಕೇರ, ಮಲ್ಪೆಯ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ರತ್ನಾಕರ ಅಮೀನ್, ತಾಂಗದಗಡಿ ವೀರಮಾರುತಿ ವ್ಯಾಯಮ ಶಾಲೆಯ ಅಧ್ಯಕ್ಷ ಮನೋಜ್ ಕುಮಾರ್, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಉಪಸ್ಥಿತರಿದ್ದರು. ಸುಮನಸಾ ಕೊಡವೂರು ಗೌರವಾಧ್ಯಕ್ಷ ಎಂ.ಎಸ್. ಭಟ್ ಸ್ವಾಗತಿಸಿ, ನಿರ್ದೇಶಕ ದಿವಾಕರ ಕಟೀಲ್ ವಂದಿಸಿ, ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸುಮನಸಾ ಕೊಡವೂರು ಉಡುಪಿ ತಂಡದ ಕಲಾವಿದರಿಂದ ವಿದ್ದು ಉಚ್ಚಿಲ್ ಇವರ ನಿರ್ದೇಶನದಲ್ಲಿ ‘ಯೇಸ’ ತುಳು ನಾಟಕ ಪ್ರದರ್ಶನಗೊಂಡಿತು.

    baikady drama felicitation roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ
    Next Article ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.