ಬೆಂಗಳೂರು: ಕನ್ನಡದಲ್ಲಿ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ ದಿನಾಂಕ 14 ಏಪ್ರಿಲ್ 2025ರ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಇವರಿಗೆ 72ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿದ್ಯಾಪೀಠ ವೃತ್ತದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಪತ್ರಕರ್ತರ ವಲಯದಲ್ಲಿ ‘ಶ್ಯಾಮ್’ ಎಂದೇ ಗುರುತಿಸಿಕೊಂಡಿದ್ದ ಇವರು ಯುವ ಪತ್ರಕರ್ತರಿಗೆ ಸರಳವಾದ ಬರವಣಿಗೆ ಶೈಲಿಯನ್ನು ಹೇಳಿ ಕೊಡುತ್ತಿದ್ದರು. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮ್ ಕನ್ನಡ ಪತ್ರಿಕೋದ್ಯಮದಲ್ಲಿ 39 ವರ್ಷಗಳಿಗೂ ಹೆಚ್ಚು ವರ್ಷ ಅನುಭವ ಹೊಂದಿದ್ದರು. ‘ಎದ್ದೇಳು ಮಂಜುನಾಥ’ ಚಲನಚಿತ್ರದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರ ನಿರ್ವಹಿಸಿ, ಸಿನಿ ರಂಗದಲ್ಲಿಯೂ ಗುರುತಿಸಿಕೊಂಡಿದ್ದರು.
ನಾನಾ ಮಾಧ್ಯಮ ಸಂಸ್ಥೆಗಳಲ್ಲಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು.