Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನದಿಂದ ರಮೇಶ್ ಕಲ್ಲಡ್ಕರಿಗೆ ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ
    Awards

    ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನದಿಂದ ರಮೇಶ್ ಕಲ್ಲಡ್ಕರಿಗೆ ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ

    October 14, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶಾರದಾ ಪೂಜಾ ಉತ್ಸವ ಸಮಿತಿಯ ನೇತೃತ್ವದಲ್ಲಿ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 11 ಅಕ್ಟೋಬರ್ 2024ರಂದು ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ನಡೆಯಿತು.

    ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸುಳ್ಯ ರೋಟರಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ. ಆಚಾರ್ಯ “ದೇವರ ಪ್ರಾರ್ಥನೆಯ‌ ಮೂಲಕ ಮನಸ್ಸಿನ ಕ್ಲೇಶಗಳು ದೂರವಾದರೆ ಅದುವೆ ನಮ್ಮ‌ ಬದುಕಿಗೆ ನಿಜವಾದ ಅಲಂಕಾರ. ಹಬ್ಬದ ಸಂತೋಷವನ್ನು ಹಂಚಿ ಸಾರ್ವಜನಿಕವಾಗಿ ಸಂಭ್ರಮಿಸುವುದರ ಹಿಂದೆ ಸಂಘಟನಾ ಶಕ್ತಿ ಜಾಗೃತವಾಗಬೇಕು. ನಿಜವಾದ ಆಶೋತ್ತರ ಅಡಗಿದೆ. ಇದು ನಿರಂತರವಾಗಿರಬೇಕು” ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಮುಕ್ಕ‌ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸುಕೇಶ್ ಕೊಟ್ಟಾರಿ ಮಾತನಾಡಿ ಧಾರ್ಮಿಕ ಆಚರಣೆಗಳು ಹೆಚ್ಚು ಹೆಚ್ಚು ನಡೆಯುವುದರ ಜೊತೆಗೆ ಸನಾತನ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸುವವರಿಗೂ ತಕ್ಕಪಾಠ ಕಲಿಸುವಂತೆ ಕರೆ ನೀಡಿದರು. ಗೋಳ್ತಮಜಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ ಮಾತನಾಡಿ “ಸಾರ್ವಜನಿಕ ಆಚರಣೆಗಳ‌ ಜೊತೆಯಲ್ಲಿ ಮನೆಮನೆಗಳಲ್ಲಿಯೂ ನಮ್ಮ ಸಂಪ್ರದಾಯ, ಆಚರಣೆಗಳಿಗೆ ಮಹತ್ವ ಸಿಗಬೇಕು” ಎಂದರು.

    ಪ್ರತಿಷ್ಠಾನದ ವತಿಯಿಂದ ಕೆ. ಶಾಂತರಾಮ ಆಚಾರ್ ಸ್ಮರಣಾರ್ಥ ನೀಡಲಾಗುವ ‘ಶಾಂತಶ್ರೀ’ ಪ್ರಶಸ್ತಿಯನ್ನು ಕಲಾ ಕ್ಷೇತ್ರದಲ್ಲಿ ಶಿಲ್ಪಾ ಗೊಂಬೆ ಬಳಗದ ಮಾಲಕ ರಮೇಶ್ ಕಲ್ಲಡ್ಕ ಇವರು ಕಲಾಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ ನೀಡಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಅವರು “ನನ್ನ ಹುಟ್ಟೂರಿನಲ್ಲಿ, ನಾನು ಕಲಿತ ಶಾಲೆಯಲ್ಲಿ, ನನ್ನ ಅಣ್ಣನ ಹೆಸರಿನಲ್ಲಿ ಸ್ವೀಕರಿಸಿರುವ ಈ ಪ್ರಶಸ್ತಿ ಎಲ್ಲ ಪ್ರಶಸ್ತಿಗಿಂತಲೂ ಹೆಚ್ಚು ಮೌಲ್ಯದ್ದು” ಎಂದರು.

    ಕಾರ್ಯಕ್ರಮದಲ್ಲಿ ನರಸಿಂಹ ಮಡಿವಾಳರವರಿಗೆ ‘ಗ್ರಾಮ ಗೌರವ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಾರ್ನಬೈಲು ಬಜಾರ್ ಗ್ರೂಪ್ ಮಾಲಕರಾದ ಲ. ಸುಧಾಕರ ಆಚಾರ್ಯ ಶುಭ ಹಾರೈಸಿದರು. ಬಿರುವೆರ್ ಕುಡ್ಲ ಬಂಟ್ವಾಳ ಘಟಕದ ಅಧ್ಯಕ್ಷರಾದ ಕಿರಣ್‌ ರಾಜ್, ಕಲ್ಲಡ್ಕ ಝಾನ್ಸಿ ರಾಣಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಆರ್. ಪೂಜಾರಿ, ಶಾರದಾ ಪೂಜಾ ಉತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ, ಕಾರ್ಯದರ್ಶಿ ಪ್ರಮಿತ್ ಶೆಟ್ಟಿ ಕುಕ್ಕಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಯತಿನ್‌ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ವಂದಿಸಿ, ದಿನೇಶ್ ಕೃಷ್ಣಕೋಡಿ ಪ್ರತಿಭಾ ಪುರಸ್ಕೃತರನ್ನು ಪರಿಚಯಿಸಿ, ರಾಜೇಶ್ ಕೊಟ್ಟಾರಿ ಕೊಳಕೀರು ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಡಾ. ಚನ್ನಪ್ಪ ಕಟ್ಟಿಯವರ ಸಮಗ್ರ ಕಥೆಗಳ ಸಂಕಲನ ‘ಕಥಾ ಕಿನ್ನುರಿ’
    Next Article ಪುತ್ತೂರಿನ ಅನುರಾಗ ವಠಾರದಲ್ಲಿ ಲೋಕಾರ್ಪಣೆಗೊಂಡ ಲೇಖನಗಳ ಸಂಗ್ರಹ ‘ತೆರೆದ ಗವಾಕ್ಷಿ’
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಬೆಂಗಳೂರಿನಲ್ಲಿ ಮಕ್ಕಳ ಕೃತಿಗಳ ಲೋಕಾರ್ಪಣೆ ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ | ಜೂನ್ 05

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.