Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡುಬಿದಿರೆಯಲ್ಲಿ ‘ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ’ ಪ್ರದಾನ ಸಮಾರಂಭ | ಮೇ 29
    Awards

    ಮೂಡುಬಿದಿರೆಯಲ್ಲಿ ‘ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ’ ಪ್ರದಾನ ಸಮಾರಂಭ | ಮೇ 29

    May 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ‘ಶಿವರಾಮ ಕಾರಂತ ಪ್ರಶಸ್ತಿ’ ಮತ್ತು ‘ಶಿವರಾಮ ಕಾರಂತ ಪುರಸ್ಕಾರ’ ಪ್ರದಾನ ಸಮಾರಂಭವು ದಿನಾಂಕ 29-05-2024ರಂದು ಸಂಜೆ 5-00 ಗಂಟೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನ ಕನ್ನಡ ಭವನದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಮರನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಶ್ರೀ ಲಕ್ಷ್ಮೀಶ ತೋಳ್ಪಾಡಿಯವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಜಾನಪದ ವಿದ್ವಾಂಸರು ಸೃಜನಶೀಲ ಲೇಖಕರು ಆಗಿರುವ ಮೈಸೂರಿನ ಪ್ರೊ. ಕೃಷ್ಣಮೂರ್ತಿ ಹನೂರ, ಖ್ಯಾತ ಕವಿಗಳು ಬರಹಗಾರರು ಆಗಿರುವ ಬೆಂಗಳೂರಿನ ಡಾ. ಚಿನ್ನಸ್ವಾಮಿ ಮೂಡ್ನಾಕೂಡು, ಕನ್ನಡದ ಕೀಲಿಮಣೆ ವಿನ್ಯಾಸ ಸಂಶೋಧಿಸಿ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿದ ಉಡುಪಿಯ ಶ್ರೀ ಕೆ.ಪಿ. ರಾವ್ ಇವರುಗಳಿಗೆ ಹಾಗೂ ಸಂಸ್ಕೃತಿಯನ್ನು ಕಟ್ಟುವ ಕಾಯಕದಲ್ಲಿ ಅರ್ಪಣಾ ಭಾವದಿಂದ 75 ವರ್ಷಗಳ ಕಾಲ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ‘ಶಿವರಾಮ ಕಾರಂತ ಪ್ರಶಸ್ತಿ’ಯನ್ನು ಮತ್ತು ‘ಶಿವರಾಮ ಕಾರಂತ ಪುರಸ್ಕಾರ’ವನ್ನು ಶ್ರೀಮತಿ ಎಚ್.ಆರ್. ಲೀಲಾವತಿಯವರ ಆತ್ಮ ಕಥನ – ‘ಹಾಡಾಗಿ ಹರಿದಾಳೆ’, ಪ್ರೊ. ಎಚ್.ಟಿ. ಪೋತೆಯವರ ‘ಅಂಬೇಡ್ಕರ್ ಮತ್ತು…’, ಡಾ. ಬಿ. ಜನಾರ್ದನ ಭಟ್ ಇವರ ‘ವಿನೂತನ ಕಥನ ಕಾರಣ’ ಹಾಗೂ ಡಾ.ನಿತ್ಯಾನಂದ ಬಿ. ಶೆಟ್ಟಿಯವರ ‘ಮಾರ್ಗಾನ್ವೇಷಣೆ’ ಎಂಬ ಕೃತಿಗಳಿಗೆ ನೀಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಕೀರ್ತನ ಯು. ಭಟ್ ಇವರ ನೃತ್ಯ ಪ್ರದರ್ಶನ | ಮೇ 27
    Next Article ಆಡುಮಾತಿನ ಕುಂದಗನ್ನಡದ ಜಾನಪದ ಕಥೆ ಹಾಗೂ ಹಾಡುಗಾರ್ತಿ ಕಾರ್ತಟ್ಟು ನಿವಾಸಿ ಕಮಲಾ ನಾಯರಿ ನಿಧನ
    roovari

    Add Comment Cancel Reply


    Related Posts

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.