ಉಡುಪಿ : ಕರ್ನಾಟಕ ಸರಕಾರ ನೂತನವಾಗಿ ರಚಿಸಿರುವ ಡಾ.ಶಿವರಾಮ ಕಾರಂತ ಟ್ರಸ್ಟ್ ಇದರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ದಿನಾಂಕ 27 ಜನವರಿ 2025ರಂದು ಬೆಳಗ್ಗೆ ಘಂಟೆ 10. 00ರಿಂದ ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.
ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ಶಿಬಿರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಶಿಬಿರಕ್ಕೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
ಆಸಕ್ತರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ಡಾ.ಶಿವರಾಮ ಕಾರಂತ ಟ್ರಸ್ಟ್ ಮೊ. ನಂ: 6362517472 ಅಥವಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮೊ.ನಂ: 9980462972 ಅನ್ನು ಸಂಪರ್ಕಿಸಬಹುದು ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಇದರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಕದ್ರಿ ಹಿಲ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ