ಭದ್ರಾವತಿ : ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಸಮಿತಿ ಭದ್ರಾವತಿ ಇದರ ವತಿಯಿಂದ ‘ಶ್ರಾವಣ ಸಂಭ್ರಮ – ಗಾಯನ ಸ್ಪರ್ಧೆ’ಯನ್ನು ದಿನಾಂಕ 21 ಆಗಸ್ಟ್ 2025ರಂದು ಮಧ್ಯಾಹ್ನ 04-00 ಗಂಟೆಗೆ ಭದ್ರಾವತಿಯ ರೋಟರಿ ಕ್ಲಬ್ ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕ.ಸಾ.ಪ. ಮತ್ತು. ಕ.ಸಾ.ಸಾಂ. ವೇದಿಕೆಯ ಜಿಲ್ಲಾಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಸುಧಾಮಣಿ ಎಂ.ಎಸ್. ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗಾಯನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.