ಮಂಗಳೂರು : ಸೌರಭ ಸಂಗೀತ ನೃತ್ಯ ಕಲಾ ಪರಿಷತ್ (ರಿ.) ಮಂಗಳೂರು ಪ್ರಸ್ತುತ ಪಡಿಸುವ ರಾಷ್ಟ್ರಕವಿ ಕುವೆಂಪು ರಚಿಸಿರುವ ‘ಶ್ರೀ ರಾಮಾಯಣ ದರ್ಶನಂ’ ನೃತ್ಯ ರೂಪಕದ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ಡಾ. ಗಣಪತಿ ಗೌಡ ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಜಿ., ಯಾದವ ಸಭಾ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಎ.ಕೆ. ಮನಿಯಾಣಿ ಮತ್ತು ಕೊಲ್ಯ ನಾಟ್ಯ ನಿಕೇತನದ ವಿದುಷಿ ರಾಜಶ್ರೀ ಉಳ್ಳಾಲ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಮೋಹನ್ ಕುಂತಾರ್ ಇವರ ಪರಿಕಲ್ಪನೆಯ ವಿದುಷಿ ಶ್ರೀವಿದ್ಯಾ ಇವರ ನಿರ್ದೇಶನದಲ್ಲಿ ನೃತ್ಯ ರೂಪಕ ಪ್ರಸ್ತುತಗೊಳ್ಳಲಿದೆ.