ಹೊಸದುರ್ಗ : ರಂಗಭೂಮಿಗೆ ಅಪೂರ್ವ ಕೊಡುಗೆ ನೀಡಿದವರಿಗೆ ಚಿತ್ರದುರ್ಗ ಜಿಲ್ಲೆಯ ಶ್ರೀ ಶಿವಕುಮಾರ ಕಲಾಸಂಘ ಕೊಡಮಾಡುವ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ನಟಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಆಯ್ಕೆಯಾಗಿದ್ದಾರೆ.
2004ರಿಂದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯು ರೂಪಾಯಿ 50,000 ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 02 ನವೆಂಬರ್ 2025 ರಿಂದ 07 ನವೆಂಬರ್ 2025ರ ವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪೀಠಾಧ್ಯಕ್ಷ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.
