ಬೆಂಗಳೂರು : ನಾಡೋಜ ಡಾ. ಬರಗೂರು ಪ್ರತಿಷ್ಠಾನ (ರಿ.) ಬೆಂಗಳೂರು ಆಯೋಜಿಸುವ ಶ್ರೀಮತಿ ರಾಜಲಕ್ಷ್ಮಿ ಬರಗೂರು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 12 ಮಾರ್ಚ್ 2025ರ ಬುಧವಾರದಂದು ಸಂಜೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಎದುರುಗಡೆ ಇರುವ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.
ರಂಗಭೂಮಿ ಮತ್ತು ಸಿನಿಮಾ ಕಲಾವಿದರಾದ ಶ್ರೀ ಸುಂದರರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಂಗಭೂಮಿ ಮತ್ತು ಸಿನಿಮಾ ಅಭಿನೇತ್ರಿಯಾದ ಶ್ರೀಮತಿ ಗಿರಿಜಾ ಲೋಕೇಶ್ ಹಾಗೂ ಚಿಂತನಶೀಲ ಲೇಖಕಿಯಾದ ಡಾ. ಎನ್. ಗಾಯತ್ರಿ ಇವರಿಗೆ ಲೇಖಕಿ ಮತ್ತು ಮಹಿಳಾ ವಿ.ವಿ. ಇದರ ವಿಶ್ರಾಂತ ಕುಲಪತಿಗಳಾದ ಡಾ. ಸಬಿಹ ಭೂಮಿಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀನಿವಾಸ್ ಉಪಸ್ಥಿತರಿರುವರು.

