ಹಾವೇರಿ : ಮಾತೋಶ್ರೀ ಗಂಗಮ್ಮ ಬೊಮ್ಮಾಯಿ ಮತ್ತು ಮಾಜಿ ಸಿಎಂ, ಶಾಸಕ ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಮೂಡಬಿದರಿಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ. ಮೋಹನ್ ಆಳ್ವ ಹಾಗೂ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಯವರಿಗೆ ದಿನಾಂಕ 28-01-2024ರಂದು ‘ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಮೋಹನ್ ಆಳ್ವ “ಶಿಕ್ಷಣ ತಜ್ಞ ಪ್ರಭಾಕರ ಕೋರೆ ಅವರೊಂದಿಗೆ ನನಗೂ ಮಾತೋಶ್ರೀ ಅವರ ಹೆಸರಿನಲ್ಲಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿದ್ದು ಸಂತಸ ತಂದಿದೆ. ಮೊದಲಿನಿಂದಲೂ ಬೊಮ್ಮಾಯಿ ಕುಟುಂಬದ ಮೇಲೆ ನನಗೆ ವಿಶೇಷ ಗೌರವ ಇದೆ” ಎಂದರು.
ಡಾ. ಪ್ರಭಾಕರ ಕೋರೆ ಮಾತನಾಡಿ, “ಮಾತೋಶ್ರೀ ಗಂಗಮ್ಮ ಬೊಮ್ಮಾಯಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದು ಅಭಿಮಾನದ ಸಂಗತಿ. ದಿ. ಎಸ್.ಆರ್. ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ನಾನು ಬೆಳೆದು ಬಂದಿದ್ದೇನೆ. ಶಿಗ್ಗಾವಿಯಲ್ಲಿ 4 ಎಕರೆ ಜಮೀನು ಒದಗಿಸಿಕೊಟ್ಟರೆ ಅರಟಾಳ ರುದ್ರಗೌಡರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆ ಕಟ್ಟಲು ಬದ್ಧರಾಗಿದ್ದೇವೆ” ಎಂದರು.
ಬಸವರಾಜ ಬೊಮ್ಮಾಯಿ ಮಾತನಾಡಿ, “ಕೆಎಲ್‌ಇ ಶಿಕ್ಷಣ ಸಂಸ್ಥೆ ಪ್ರಾರಂಭಿಸುವಲ್ಲಿ ಅರಟಾಳ ರುದ್ರಗೌಡರ ಪಾತ್ರ ಅತ್ಯಂತ ಮುಖ್ಯವಾಗಿದೆ. ಹೀಗಾಗಿ ಅವರ ಹೆಸರಿನಲ್ಲಿ ಇಲ್ಲಿ ಶಿಕ್ಷಣ ಸಂಸ್ಥೆ ಅವಶ್ಯವಾಗಿದೆ. ಮೂಡಬಿದರಿಯ ಆಳ್ವಾಸ್ ಶಿಕ್ಷಣ ಸಂಸ್ಥೆ ನಮ್ಮ ಭಾರತೀಯ ಸಂಸ್ಕೃತಿ, ಕಲೆ ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ. ಪ್ರಭಾಕರ ಕೋರೆ