ಮಂಗಳೂರು : ‘ಅನುಪಮ’ ಮಹಿಳಾ ವೇದಿಕೆಯ ಬೆಳ್ಳಿ ಹಬ್ಬದ ಸಂಭ್ರಮ ಮತ್ತು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 15 ಜನವರಿ 2026ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯೆ ಸಮೀನಾ ಅಫ್ಶಾನ್ ಇವರ ವಹಿಸಲಿದ್ದು, ಅನುಪಮ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ. ಇವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಗೌರವಾನ್ವಿತ ವಿಧಾನ ಸಭಾ ಸ್ಪೀಕರ್ ಯು.ಟಿ. ಕಾದರ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದು, ಖ್ಯಾತ ಸಾಹಿತಿ ಕೆ. ಶರೀಫಾ ಇವರು ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ಕೆ.ಎ. ರೋಹಿಣಿ, ಲೇಖಕಿ ಸರಸ ಬಿ. ಕೃಷ್ಣ ಕಮ್ಮರಡಿ, ಸಮಾಜ ಸೇವಕಿ ಹರಿಣಿ ಕೆ. ಮತ್ತು ಹಿರಿಯ ಓದುಗರಾದ ಆಯಿಶಾ ಇ. ಶಾಫಿ ಇವರನ್ನು ಸನ್ಮಾನಿಸಲಾಗುವುದು.


