ಮಣಿಪಾಲ : ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಮಣಿಪಾಲ ಮತ್ತು ಕಲ್ಲಚ್ಚು ಪ್ರಕಾಶನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಾಡಹಬ್ಬ ಪ್ರಯುಕ್ತ ‘ನವರಸಗಳಲ್ಲಿ ನವರಾತ್ರಿ’ ವೈಶಿಷ್ಟಪೂರ್ಣ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ದಿನಾಂಕ 22 ಸೆಪ್ಟೆಂಬರ್ 2025ರಂದು ಸಂಜೆ 3-30 ಗಂಟೆಗೆ ಮಣಿಪಾಲ ಸರಳೇಬೆಟ್ಟು ರತ್ನ ಸಂಜೀವ ಕಲಾ ಮಂಡಲ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಮಹೇಶ್ ಠಾಕೂರ್ ಇವರು ಉದ್ಘಾಟನೆ ಮಾಡಲಿದ್ದು, ನಿತ್ಯಾನಂದ ಪಡ್ರೆ ಮಣಿಪಾಲ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಕನ್ಯಾ ಕಳಸ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಗೈದಿರುವ ಸಾಧಕರಿಗೆ ಅಭಿನಂದನ ಸನ್ಮಾನ ನಡೆಯಲಿದೆ.