ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶೇಷ ಮಹಾಸಭೆ 27 ಏಪ್ರಿಲ್ 2025ರ ಭಾನುವಾರ ಬೆಳಿಗ್ಗೆ 11.00 ಗಂಟೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ವಹಿಸಲಿದ್ದು, ಪರಿಷತ್ತಿನ ಜಿಲ್ಲಾ ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳು ಸಭೆಯಲ್ಲಿ ಪಾಲ್ಗೊಂಡು ವಾರ್ಷಿಕ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ. ಪಿ. ಕೇಶವ ಕಾಮತ್ ವಿನಂತಿಸಿದ್ದಾರೆ.