Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ
    Book Release

    ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ

    July 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು, ವಿಶೇಷ ಸಂಚಿಕೆಯನ್ನು ದಿನಾಂಕ 22-07-2024ರಂದು ಬಂಟ್ವಾಳ ಎಸ್.ವಿ.ಎಸ್. ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ಅವರು “ನಮ್ಮ ಸಂಸ್ಥೆಯ ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡಿದ್ದ ಮಾಲತಿ ಶೆಟ್ಟಿ ಅವರು ಜಾಗತೀಕರಣದ ಈ ವೇಳೆಯಲ್ಲೂ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯ. ಶಾಲೆ ಕಾಲೇಜುಗಳಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಪ್ರಯತ್ನಪಟ್ಟಾಗ ಮಾತ್ರ ಕನ್ನಡಕ್ಕೆ ಸ್ಥಾನಮಾನ, ಗೌರವ ಪ್ರಾಪ್ತಿಯಾಗಲಿದೆ. ಕಳೆದ 10 ವರ್ಷಗಳಲ್ಲಿ 40 ಪುಸ್ತಕ ಬಿಡುಗಡೆ, 101 ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅವರು ಕನ್ನಡ ಭಾಷೆ ಉಳಿವಿಗೆ ಮಹತ್ತರ ಕಾಣಿಕೆ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದರು.

    ಭುವನಾಭಿರಾಮ ಉಡುಪ ಮಾತನಾಡಿ “ಕನ್ನಡ ಭಾಷೆ ಬೆಳವಣಿಗೆಗೆ ವಿವಿಧ ರೀತಿಯ ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿರುವ ಮಾಲತಿ ಶೆಟ್ಟಿ ಮತ್ತವರ ತಂಡಕ್ಕೆ ಅಭಿನಂದನೆಗಳು” ಎಂದರು. ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ “ಕನ್ನಡವನ್ನು ನಾವೇ ಉಳಿಸಬೇಕು. ಯಾಕೆಂದರೆ ಎಷ್ಟೋ ಶಾಲೆಗಳು ಮುಚ್ಚುವ ಹಂತದಲ್ಲಿವೆ, ಶಿಕ್ಷಕರಿಗೆ ಸಂಬಳ ಸಿಗುತ್ತಿಲ್ಲ. ನಾವು ಭಾಷೆಯನ್ನು ಉಳಿಸಿ ಬೆಳೆಸಲು ನಿರಂತರ ದುಡಿಯಬೇಕು” ಎಂದರು. ವೇದಿಕೆಯಲ್ಲಿ ಮಾಲತಿ ಶೆಟ್ಟಿ ಮಾಣೂರು, ಸತ್ಯಪ್ರಕಾಶ್ ಶೆಟ್ಟಿ, ಸಾಹಿತಿ ಡಾ. ಅರುಣಾ ನಾಗರಾಜ್, ಸುರೇಖಾ ಯಳವಾರ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೆರೆಕಾಡಿನಲ್ಲಿ ಯಕ್ಷಗಾನ ಪ್ರದರ್ಶನ | ಜುಲೈ 27 ಮತ್ತು 28
    Next Article ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ’ | ಜುಲೈ 28
    roovari

    Add Comment Cancel Reply


    Related Posts

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮದ 29ನೆಯ ಸಂಚಿಕೆ

    June 13, 2026

    ಸೃಜನಶೀಲ ಸಾಹಿತ್ಯ ಸೇವೆಗೆ ಸಂದ ಗೌರವ

    June 13, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.