ಮಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ತಾಯಂದಿರ ದಿನ ಅಂಗವಾಗಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ ವಿಶ್ವ ಕೊಂಕಣಿ ಕೇಂದ್ರದಲ್ಲಿ ದಿನಾಂಕ 11 ಮೇ 2025ರಂದು ಜರುಗಿತು.
ಯುವ ಲೇಖಕಿ ವಿಲ್ಮಾ ಬಂಟ್ವಾಳ ಅಧ್ಯಕ್ಷತೆ ವಹಿಸಿ, ತಾಯ್ತನಕ್ಕೆ ಸಂಬಂಧಿಸಿದ ಕವಿತೆಗಳನ್ನು ವಾಚಿಸಿದರು. ಡಯನಾ ಶರಲ್ ಲೋಬೊ, ಮೇರಿ ಸಲೊಮಿ ಡಿಸೋಜ – ಕವಿತೆ, ಫೆಲ್ಸಿ ಲೋಬೊ – ಪ್ರಬಂಧ ಮತ್ತು ಸ್ಮಿತಪ್ರಜ್ಞ – ಸಣ್ಣಕತೆ ಪ್ರಸ್ತುತಪಡಿಸಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ಪ್ರಾಸ್ತಾವಿಕ ಮಾತನಾಡಿದರು. ವಿಶ್ವ ಕೊಂಕಣಿ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ದೇವದಾಸ ಪೈ ಸ್ವಾಗತಿಸಿದರು. ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್.ಎಂ. ಪೆರ್ನಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.