ಪುತ್ತೂರು : ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ದಿನಾಂಕ 15 ಜುಲೈ 2025ರಂದು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಈಶ್ವರ ಭಟ್ ಪುಳು ಪ್ರಾಯೋಜಕತ್ವದಲ್ಲಿ ‘ಸುಭದ್ರಾ ಕಲ್ಯಾಣ’ ತಾಳಮದ್ದಳೆ ನಡೆಯಿತು.
ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಆನಂದ ಸವಣೂರು, ಹಿಮ್ಮೇಳದಲ್ಲಿ ಪಿ.ಟಿ. ಜಯರಾಮ ಭಟ್, ಜಯಪ್ರಕಾಶ್ ನಾಕೂರು, ಟಿ.ಡಿ. ಗೋಪಾಲಕೃಷ್ಣ ಭಟ್, ಬಲರಾಮನಾಗಿ ಗುಂಡ್ಯಡ್ಕ ಈಶ್ವರ ಭಟ್, ಶ್ರೀಕೃಷ್ಣನಾಗಿ ವಿ.ಕೆ. ಶರ್ಮ ಅಳಿಕೆ, ಅರ್ಜುನನಾಗಿ ಗುಡ್ಡಪ್ಪ ಬಲ್ಯ, ಸುಭದ್ರೆಯಾಗಿ ಭಾಸ್ಕರ ಬಾರ್ಯ, ಸತ್ಯಭಾಮೆಯಾಗಿ ಮಾಂಬಾಡಿ ವೇಣುಗೋಪಾಲ ಭಟ್, ವನಪಾಲಕನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಆಂಜನೇಯ ಉಭಯ ಯಕ್ಷಗಾನ ಸಂಘಗಳಿಂದ ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ದಿನಾಂಕ 25 ಜುಲೈ 2025ರಿಂದ ಜರಗಲಿರುವ ತಾಳಮದ್ದಳೆ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕರಾದ ಪುಳು ಈಶ್ವರ ಭಟ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಉಭಯ ಸಂಘಗಳ ಅಧ್ಯಕ್ಷರಾದ ಭಾಸ್ಕರ ಬಾರ್ಯ, ಪ್ರೇಮಲತಾ ರಾವ್, ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಬೊಳುವಾರು ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ಪ್ರಬಂಧಕ ಸುಬ್ರಹ್ಮಣ್ಯ ಭಟ್ ವಂದಿಸಿದರು.