ಮಂಗಳೂರು : ಸನಾತನ ಯಕ್ಷಾಲಯ (ರಿ.) ಮಂಗಳೂರು ಇದರ ವಾರ್ಷಿಕೋತ್ಸವವು ದಿನಾಂಕ 16-06-2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಪದ್ಮವಿಭೂಷಣ ಡಾ. ಶ್ರೀ. ಡಿ. ವೀರೇಂದ್ರ ಹೆಗ್ಗಡೆ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಸರಕಾರದ ವಿಧಾನಸಭೆ ಮಾನ್ಯ ಸ್ಪೀಕರ್ ಶ್ರೀ ಯು. ಟಿ. ಖಾದರ್, ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಒಡಿಯೂರು ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ರೈ, ಭಾರತ್ ಕೋ-ಅಪರೇಟಿವ್ ಬ್ಯಾಂಕಿನ ಛೇರ್ ಮನ್ ಶ್ರೀ ಸೂರ್ಯಕಾಂತ್ ಜೆ. ಸುವರ್ಣ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕರಾದ ಶ್ರೀ ವಸಂತ ಶೆಟ್ಟಿ, ಬಂಟರ ಸಂಘ ಥಾಣೆ, ಮುಂಬಯಿ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ, ಪಟ್ಲ ಫೌಂಡೇಷನ್ ಎಕ್ಕಾರು ಘಟಕದ ಅಧ್ಯಕ್ಷರಾದ ಶ್ರೀ ಗಿರೀಶ್ ಎಂ. ಶೆಟ್ಟಿ, ಮುಂಬೈ ಉದ್ಯಮಿ ಶ್ರೀ ಆನಂದ ಬಂಗೇರ ಹಾಗೂ ಶ್ರೀ ಕೃಷ್ಣಪ್ರಕಾಶ ಉಳಿತ್ತಾಯ ಪೆರ್ಮಂಕಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಅಪರಾಹ್ನ 2.00ರಿಂದ ಯಕ್ಷ ಗುರು ಶ್ರೀ ರಾಕೇಶ್ ರೈ ಅಡ್ಕ ಇವರ ನಿರ್ದೇಶನದಲ್ಲಿ ಶಿಷ್ಯ ವೃಂದದವರಿಂದ ಪ್ರಚಂಡ ಜೋಡಾಟ ‘ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ.