ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಇವರ ಆಶ್ರಯದಲ್ಲಿ ಪ್ರಸ್ತುತ ಪಡಿಸುವ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ‘ಶ್ರೀ ಕೃಷ್ಣ ತುಲಾಭಾರ’ ಕಥಾಕೀರ್ತನ ಕಾರ್ಯಕ್ರಮವನ್ನು ದಿನಾಂಕ 20 ಮೇ 2026ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುತ್ತೂರಿನ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷಗಾನ ಪ್ರತಿಷ್ಠಾನದ ಅಧ್ಯಕ್ಷರಾದ ಸುಂದರ ಶೆಟ್ಟಿ ಬೆಟ್ಟಂಪಾಡಿ ಇವರು ಗೌರವ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

