ಬೆಂಗಳೂರು : ಬಿ.ಎಂ.ಶ್ರೀ. ಪ್ರತಿಷ್ಠಾನ (ರಿ.) ಮತ್ತು ಎಂ.ವಿ.ಸೀ. ಸ್ನಾತಕೋತ್ತರ ಸಂಶೋಧನ ಕೇಂದ್ರ ಇದರ ವತಿಯಿಂದ ‘ಶ್ರೀ ಸಾಹಿತ್ಯ ಪ್ರಶಸ್ತಿ 2025’ ಪ್ರದಾನ ಸಮಾರಂಭವನ್ನು ದಿನಾಂಕ 25 ಜನವರಿ 2025ರಂದು ಬೆಳಗ್ಗೆ 10-30 ಗಂಟೆಗೆ ಬಿ.ಎಂ.ಶ್ರೀ. ಕಲಾಭವನದ ಎಂ.ವಿ.ಸೀ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕರಾದ ಪ್ರಖರ ಸ್ತ್ರೀ ಸಂವೇದನೆಯ ಲೇಖಕಿ ಪ್ರೊ. ವೀಣಾ ಶಾಂತೇಶ್ವರ ಇವರಿಗೆ ‘ಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನು ಹಿರಿಯ ವಿದ್ವಾಂಸ ಅಂತಾರಾಷ್ಟ್ರೀಯ ಖ್ಯಾತಿಯ ಸಂಶೋಧಕರಾದ ನಾಡೋಜ ಡಾ. ಹಂಪ ನಾಗರಾಜಯ್ಯ ಇವರು ಪ್ರದಾನ ಮಾಡಲಿರುವರು.