ಕಾಸರಗೋಡು : ಶ್ರೀಮಾನ್ ಕೃಷ್ಣಮೂರ್ತಿ ಕುಲಕರ್ಣಿ ಹುಬ್ಬಳ್ಳಿ ಸಾರತ್ಯದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇದೀಗ ಕೇರಳ ರಾಜ್ಯದಲ್ಲಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತಾರಗೊಳಿಸುವ ಸದುದ್ದೇಶದಿಂದ ಕಾರ್ಯ ಪ್ರವೃತವಾಗಿದೆ. ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಇವರನ್ನು ಕೇರಳ ರಾಜ್ಯ ಸಂಚಾಲಕರನ್ನಾಗಿ ನಿಯಮಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯಲ್ಲಿ ಚುಟುಕು ಕವಿಗಳ ಜನಪ್ರಿಯ ಕವಿ, ಸಂಘಟಕ, ಸಂಪನ್ಮೂಲ ವ್ಯಕ್ತಿಯಾದ ಶ್ರೀ ವೆಂಕಟ್ ಭಟ್ ಎಡನೀರು ಇವರನ್ನು ಕಾಸರಗೋಡು ಜಿಲ್ಲಾ ವ್ಯಾಪ್ತಿಗೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇವರು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಅನೇಕ ಚುಟುಕು ಕೃತಿಗಳನ್ನು ಹೊರತಂದಿದ್ದು, ನೂರಾರು ಕವಿಗೋಷ್ಠಿ, ಕವಿತಾ ರಚನಾ ಕಾರ್ಯಗಾರಗಳನ್ನು ಸಂಘಟಿಸಿದ್ದಾರೆ. ಇವರ ಪ್ರಕಟಿತ ಚುಟುಕು ಕೃತಿಗಳು, ಖರ್ಜುರ, ನೂರೊಂದು ಕವಿತೆಗಳು, ತಿಳಿಸಾರು, ಪೆಟ್ಟಿಗೆ ಭೂತ, 302 ಎಳ್ಳುಂಡೆ. ವೆಂಕಟ್ ಎಡನೀರು ಇವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇದರ ಕಾಸರಗೋಡು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ, ಇವರಿಗೆ ಜಿಲ್ಲಾ ಘಟಕವನ್ನು ವಿಸ್ತರಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಕಾರ್ಯ ಪ್ರವೃತರಾಗಬೇಕೆಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಕೃಷ್ಣಮೂರ್ತಿ ಕುಲಕರ್ಣಿಯವರ ಸಮ್ಮತದೊಂದಿಗೆ ಕೇರಳ ರಾಜ್ಯ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.