Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಎಸ್.ಆರ್. ರಂಗನಾಥನ್ ದಿನಾಚರಣೆ
    Literature

    ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಎಸ್.ಆರ್. ರಂಗನಾಥನ್ ದಿನಾಚರಣೆ

    August 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಉಡುಪಿ : ರಾಷ್ಟ್ರೀಯ ಗ್ರಂಥಪಾಲಕರ ದಿನದ ಅಂಗವಾಗಿ ಭಾರತದ ಗ್ರಂಥಾಲಯ ಪಿತಾಮಹ ಎಸ್.ಆರ್.ರಂಗನಾಥನ್ ಇವರ ದಿನಾಚರಣೆಯ ಕಾರ್ಯಕ್ರಮವು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ದಿನಾಂಕ 12-08-2023ರಂದು ನಡೆಯಿತು. ಎಂ.ಜಿ.ಎಂ.ಕಾಲೇಜಿನ ಗ್ರಂಥಪಾಲಕರಾದ ಶ್ರೀ ಕಿಶೋರ್ ಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ “ನವಭಾರತದ ಗ್ರಂಥಾಲಯದ ಪರಿಕಲ್ಪನೆಗೆ ಹೊಸದಿಕ್ಕನ್ನು ಕಲ್ಪಿಸಿಕೊಟ್ಟ ಕೀರ್ತಿ ಡಾ.ಎಸ್.ಆರ್.ರಂಗನಾಥನ್ ಅವರಿಗೆ ಸಲ್ಲುತ್ತದೆ. ಅವರು ಮೂಲತಃ ಗಣಿತಾಸ್ತ್ರದ ಪ್ರಾಧ್ಯಾಪಕರು. ಅವರ ಅದಮ್ಯವಾದ ಪುಸ್ತಕ ಪ್ರೀತಿ ಅವರನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹನನ್ನಾಗಿ ರೂಪಿಸಿದೆ. ಅವರು ಅಂದು ರೂಪಿಸಿದ ವ್ಯವಸ್ಥೆಯಿಂದಾಗಿ ಶಾಲಾ ಕಾಲೇಜುಗಳಲ್ಲಿ, ಸಂಶೋಧನಾ ಕೇಂದ್ರಗಳಲ್ಲಿ ಗ್ರಂಥಾಲಯ ಆಧುನಿಕ ವ್ಯವಸ್ಥೆಯೊಂದಿಗೆ ಪರಿವರ್ತನೆಗೊಂಡಿದೆ. ಡಾ.ಎಸ್‌.ಆರ್.ರಂಗನಾಥನ್‌ ಅವರು ಆಗೋಸ್ಟ್ 12, 1892ರಲ್ಲಿ ಜನಿಸಿದರು. ಅವರು ಗ್ರಂಥಾಲಯದ ಬಗ್ಗೆ ಮಾಡಿದ ಸಾಧನೆ, ನೀಡಿದ ಕೊಡುಗೆ ಹಾಗೂ ಅವರ ಸೇವೆಗಾಗಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯಾಗಿ ಆಚರಿಸಲಾಗುತ್ತದೆ” ಎಂದು ಹೇಳಿದರು.

    ರಂಗನಾಥನ್ ಗ್ರಂಥಾಲಯಕ್ಕೆ ನೀಡಿದ ಕೊಡುಗೆಯನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿಯವರು ವಿವರಿಸಿದರು. ಗ್ರಂಥಪಾಲಕರಾದ ಶ್ರೀ ವೆಂಕಟೇಶ್ ನಾಯ್ಕ, ಶ್ರೀಮತಿ ರಕ್ಷತಾ, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ‘ಜನಪದ ಗೀತೆ ಹಾಗೂ ರಂಗಸಂಗೀತ’ ಗಾಯನ ಕಾರ್ಯಕ್ರಮ
    Next Article ಸಾದ್ ಸೈಮಾಚೊ (ಪ್ರಕೃತಿಯ ನಾದಗಳು): ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗ
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ‘ನ್ಯಗ್ರೋಧ’ ಜಯಲಕ್ಷ್ಮಿ ಹೆಗ್ಡೆ ನಡೆದು ಬಂದ ದಾರಿ ಕೃತಿ ಬಿಡುಗಡೆ ಸಮಾರಂಭ

    February 24, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.