ಸಾಗರ : ಡಾ. ಹೆಚ್. ಗಣಪತಿಯಪ್ಪ ಸೇವಾ ಟ್ರಸ್ಟ್ (ರಿ.) ಸಾಗರ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಾಗರ ಇದರ ವತಿಯಿಂದ ‘ಡಾ. ಹೆಚ್. ಗಣಪತಿಯಪ್ಪ ನೇಗಿಲ ಯೋಗಿ’ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 18 ಏಪ್ರಿಲ್ 2025ರಂದು ಸಂಜೆ 6-00 ಗಂಟೆಗೆ ಸಾಗರ ಅಗ್ರಹಾರದ ಶೃಂಗೇರಿ ಶಂಕರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಇವರು ಈ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಆಶಯ ಮಾತುಗಳನ್ನಾಡಲಿರುವರು. ಖ್ಯಾತ ವಾಗ್ಮಿ ಸುಧೀರ್ ಕುಮಾರ್ ಮುರೊಳ್ಳಿ ಇವರು ಪ್ರಧಾನ ಉಪನ್ಯಾಸ ನೀಡಲಿದ್ದು, ಕಾಗೋಡು ತಿಮ್ಮಪ್ಪ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ಜಾನಪದ ಪರಿಷತ್ತು ಕಲಾ ಹಾಗೂ ಕಲಿಕಾರ್ಥಿಗಳ ತಂಡದವರಿಂದ ಗಾಯನ ಪ್ರಸ್ತುತಗೊಳ್ಳಲಿದೆ.