Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ 9ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ | ಏಪ್ರಿಲ್ 10ರಿಂದ 15
    Music

    ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ 9ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ | ಏಪ್ರಿಲ್ 10ರಿಂದ 15

    March 29, 2024No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹುಬ್ಬಳ್ಳಿ : ಜಗದ್ಗುರು ಶ್ರೀ ಸಿದ್ದಾರೂಢ ಮಹಾಸ್ವಾಮಿಗಳವರ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ 10-04-2024ರಿಂದ 15-04-2024ರವರೆಗೆ ರಾಜ್ಯ ಮಟ್ಟದ ಒಂಭತ್ತನೇ ವರ್ಷದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಭಜನಾ ತಂಡದವರು ದಿನಾಂಕ 10-04-2024ರೊಳಗಾಗಿ ಶ್ರೀಮಠದ ಟ್ರಸ್ಟ್ ಕಮಿಟಿಯ ಕಾರ್ಯಾಲಯದಲ್ಲಿ ಹೆಸರು ನೋಂದಾಯಿಸಬೇಕೆಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷರು ಹಾಗೂ ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಪೂಜೇರಿ ಇವರು ತಿಳಿಸಿದರು. ಭಾಗವಹಿಸುವ ಭಜನಾ ಮೇಳದವರಿಗೆ ಶ್ರೀಮಠದಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಮತ್ತು ಒಂದು ಬದಿಯ ಬಸ್ಸು ಚಾರ್ಜನ್ನು ಪ್ರತಿ ತಂಡದ 6 ಜನರಿಗೆ ನೀಡಲಾಗುವದು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಂದು ಭಜನಾ ತಂಡಕ್ಕೆ ‘ಸವಿನೆನಪಿನ ಕಾಣಿಕೆ’ ಹಾಗೂ ಪ್ರತಿಯೊಂದು ತಂಡದ ಪ್ರತಿಯೊಬ್ಬ ಕಲಾವಿದರಿಗೂ ‘ಪ್ರಶಸ್ತಿ ಪತ್ರ’ ನೀಡಲಾಗುವುದು. ದಿನಾಂಕ 10-04-2024ರಂದು ಮುಂಜಾನೆ 10-30ಕ್ಕೆ ಉದ್ಘಾಟನಾ ಸಮಾರಂಭ ಜರುಗುವುದು.

    ಬಹುಮಾನಗಳ ವಿವರ : ಪ್ರಥಮ : ರೂ.1,00,000/- ದ್ವಿತೀಯ : ರೂ.80,000/- ತೃತೀಯ : ರೂ.70,000/-
    ಸಮಾಧಾನಕರ : ರೂ.9,000/- (ಹತ್ತು ತಂಡಗಳನ್ನು ಆಯ್ಕೆಮಾಡಿ, ಪ್ರತಿ ತಂಡಕ್ಕೆ ರೂ.9,000/- ನೀಡಲಾಗುವುದು.)
    16 ವರ್ಷದ ಒಳಗಿನ ಬಾಲಕ ಹಾಗೂ ಬಾಲಕಿಯರಿಗೆ ಪ್ರತಿಭಾ ಪುರಸ್ಕಾರ ರೂ.10,000/- (ಒಂದು ಬಾಲಕರ ತಂಡ ಮತ್ತು ಒಂದು ಬಾಲಕಿಯರ ತಂಡಕ್ಕೆ ಮಾತ್ರ) ಮಹಿಳಾ ಭಜನಾ ತಂಡಕ್ಕೆ ಪುರಸ್ಕಾರ ರೂ.10,000/- (ಒಂದು ತಂಡಕ್ಕೆ ಮಾತ್ರ)

    ವೈಯುಕ್ತಿಕ ಬಹುಮಾನಗಳ ವಿವರ :
    ಉತ್ತಮ ಹಾಡುಗಾರರಿಗೆ ರೂ.3,000/- (ಇಬ್ಬರಿಗೆ ಮಾತ್ರ)
    ಉತ್ತಮ ಹಾರ್ಮೋನಿಯಂ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ)
    ಉತ್ತಮ ತಬಲಾ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ)
    ಉತ್ತಮ ತಾಳ ವಾದಕರಿಗೆ : ರೂ.3,000/- (ಇಬ್ಬರಿಗೆ ಮಾತ್ರ)
    ಉತ್ತಮ ಧಮಡಿ ವಾದಕರಿಗೆ ರೂ.3,000/- (ಇಬ್ಬರಿಗೆ ಮಾತ್ರ)

    ಭಜನಾ ಸ್ಪರ್ಧೆಯ ನಿಯಮಾವಳಿಗಳು : ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡದವರಿಗೆ ಮೂರು ಪದಗಳನ್ನು ಹಾಡುವ ಅವಕಾಶವಿದ್ದು, ಮೂರೂ ಪದಗಳನ್ನು 18 ನಿಮಿಷಗಳಲ್ಲಿ ಹಾಡಬೇಕು. ಪ್ರತಿ ತಂಡದವರು ಎರಡು ಪದ್ಯಗಳನ್ನು ಕೈವಲ್ಯ ಸಾಹಿತ್ಯದ ಮೇಲೆ ಕಡ್ಡಾಯವಾಗಿ ಹಾಡಬೇಕು (ಕೈವಲ್ಯ ಸಾಹಿತ್ಯ ಎಂದರೆ ಶ್ರೀಮನ್ ನಿಜಗುಣ ಶಿವಯೋಗಿಗಳವರ, ಶ್ರೀ ಸರ್ಪಭೂಷಣ ಶಿವಯೋಗಿಳವರ, ಶ್ರೀ ಮಹಾಲಿಂಗರಂಗರ ಸಾಹಿತ್ಯಗಳು), ಪ್ರತಿ ತಂಡದವರು ಮೂರನೇ ಪದ್ಯವನ್ನು ಜಗದ್ಗುರು ಶ್ರೀ ಸಿದ್ಧಾರೂಢರ ಮೇಲಿನ ಪದ್ಯ, ದಾಸರ ಪದ್ಯ, ಶಿಶುನಾಳ ಶರೀಫರ ಪದ್ಯ ಹಾಗೂ ವಚನ ಸಾಹಿತ್ಯ ಇವುಗಳಲ್ಲಿ ಯಾವುದಾದರೊಂದು ಹಾಡಬಹುದು ಇಲ್ಲವೇ ಮೂರು ಪದ್ಯಗಳನ್ನು ಕೈವಲ್ಯ ಸಾಹಿತ್ಯದ ಮೇಲೆ ಹಾಡಬಹುದು. ಶ್ರೀ ಸಿದ್ಧಾರೂಢರ ಮೇಲಿನ ಪದ್ಯ, ದಾಸರ ಪದ್ಯ, ಶರೀಫರ ಪದ್ಯ ಹಾಡುವವರು ತಮ್ಮ ಹಾಡಿನ ಸಾಹಿತ್ಯದ ಒಂದು ಪ್ರತಿಯನ್ನು ನಿರ್ಣಾಯಕರ ಕಡೆ ಒಪ್ಪಿಸಿ ಹಾಡಬೇಕು. ತಾವು ಹಾಡುವ ಪದ್ಯದ ಹೆಸರು, ರಚಿಸಿದ ಕವಿಗಳ ಹೆಸರು, ರಾಗ, ತಾಳಗಳ ವಿವರವನ್ನು ಒಂದು ಹಾಳೆಯ ಮೇಲೆ ಬರೆದು ನಿರ್ಣಾಯಕರ ಕಡೆ ಕೊಟ್ಟು ಹಾಡಬೇಕು. ಜಾನಪದ ಹಾಗೂ ಸಿನೆಮಾ ಶೈಲಿಯಲ್ಲಿ ಹಾಡುವವರಿಗೆ ಅವಕಾಶ ನೀಡಲಾಗುವದಿಲ್ಲ. ಒಂದು ಸ್ಪರ್ಧೆಯಲ್ಲಿ ಭಾಗವಹಿಸುವ ತಂಡದ ಕಲಾವಿದರ ಸಂಖ್ಯೆ 6ಕ್ಕಿಂತ ಕಡಿಮೆ ಇರಬಾರದು ಮತ್ತು 10ಕ್ಕಿಂತ ಹೆಚ್ಚಿಗೆ ಇರಬಾರದು. ಒಂದು ತಂಡದಲ್ಲಿ ಭಾಗವಹಿಸಿದ ಕಲಾವಿದರಿಗೆ ಮತ್ತೊಂದು ತಂಡದಲ್ಲಿ ಹಾಡಲು ಅವಕಾಶ ಇರುವದಿಲ್ಲ. ಆದರೆ ತಬಲಾ ವಾದಕರಿಗೆ ಮಾತ್ರ ಕೇವಲ 2 ತಂಡಗಳಲ್ಲಿ ತಬಲಾ ಸಾಥ್ ನೀಡಲು ಅವಕಾಶ ನೀಡಲಾಗುವುದು. ಇನ್ನುಳಿದ ನಿಯಮಗಳನ್ನು ಸ್ಪರ್ಧೆಯ ಮುಂಚಿತವಾಗಿ ಸ್ಥಳದಲ್ಲಿಯೇ ಎಲ್ಲಾ ತಂಡದವರಿಗೆ ತಿಳಿಸಲಾಗುವುದು. ಸ್ಪರ್ಧೆಯ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಂದಲ್ಲಿ ನಿರ್ಣಾಯಕರ ಹಾಗೂ ಶ್ರೀ ಸಿದ್ಧಾರೂಢ ಸ್ವಾಮಿಯವರ ಟ್ರಸ್ಟ್ ಕಮಿಟಿಯ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಸಮಿತಿಯ ನಿರ್ಣಯವೇ ಅಂತಿಮ. ಇದರಲ್ಲಿ ಬೇರೆಯವರಿಗೆ ಅವಕಾಶ ಇರುವದಿಲ್ಲ.

    ಮಹತ್ವದ ಸೂಚನೆ : ಪ್ರತಿ ದಿವಸ 25 ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುವುದು. 13ನೇ ತಾರೀಖಿನವರೆಗೆ ಪ್ರಥಮ ಸುತ್ತು ಜರುಗುವದು ಹಾಗೂ ಇದರಲ್ಲಿ ಆಯ್ಕೆಯಾದ ತಂಡಗಳಿಗೆ ಕೊನೆಯ ದಿನ 14ನೇ ತಾರೀಖಿನ ದಿನ ನಡೆಯುವ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವದು. ಅಂತಿಮ ಸುತ್ತಿನಲ್ಲಿ ಆಯ್ಕೆಯಾದ ತಂಡದವರಿಗೆ ಮಾತ್ರ ಮೇಲ್ಕಾಣಿಸಿದ ಬಹುಮಾನಗಳನ್ನು ನೀಡಲಾಗುವದು. ಸದರೀ ಬಹುಮಾನ ವಿತರಣಾ ಕಾರ್ಯಕ್ರಮವು ದಿನಾಂಕ 15-04-2024ರಂದು ಜರಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಶ್ರೀ ಶಾಮಾನಂದ ಬಿ. ಪೂಜೇರಿ ಅಧ್ಯಕ್ಷರು, ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಹಾಗೂ ಧರ್ಮದರ್ಶಿಗಳು, ಶ್ರೀ ಸಿದ್ದಾರೂಢ ಸ್ವಾಮಿಯವರ ಮಠ ಟ್ರಸ್ಟ್ – 9880169881,8095882033.

    ಶ್ರೀ ಆತ್ಮನಂದ ಸ್ವಾಮೀಜೀಯವರು, ಶಾಮಾನಂದ ಬಿ. ಪೂಜೇರಿ ಅಧ್ಯಕ್ಷರು-ರಾಜ್ಯಮಟ್ಟದ ಭಜನಾ ಸ್ಪರ್ಧೆ ಸಮಿತಿ, ಬಸವರಾಜ ಸಿ. ಕಲ್ಯಾಣಶೆಟ್ಟರ –ಚೆರ್ಮನ್ ಮತ್ತು ಡಾ. ವಿ.ಹೆಚ್.ಶಿವಕೀರ್ತಿಯವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಯುವ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಇವರಿಂದ ಬಾನ್ಸುರಿ ವಾದನ
    Next Article ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ | ಮಾರ್ಚ್ 30
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಆಲಾಪ್’ ಶಾಸ್ತ್ರೀಯ ಸಂಗೀತ ಕಛೇರಿ | ಮೇ 10

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.